More

    ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆ ವೈಫಲ್ಯ ಮತ್ತೊಮ್ಮೆ ಸಾಬೀತು: ಸಿದ್ದರಾಮಯ್ಯ

    ಬೆಂಗಳೂರು: ಮಂಗಳೂರಲ್ಲಿ ಸಂಭವಿಸಿದ ಆಟೋ ಸ್ಫೋಟ ಪ್ರಕರಣವು ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

    ಸರಣಿ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ರಾಜ್ಯದ ಜನತೆ ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ಕೇಳಿಕೊಳ್ಳುತ್ತಿದ್ದೇನೆ. ಕಳವಳಕಾರಿಯಾದ ಈ ಘಟನೆ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

    ಮಂಗಳೂರು ನಗರದ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಶನಿವಾರ ಸಂಜೆ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಆಕಸ್ಮಿಕವಲ್ಲ, ಇದೊಂದು ವಿಧ್ವಂಸಕ ಕೃತ್ಯ, ಭಯೋತ್ಪಾದಕ ಕೃತ್ಯ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ದೃಢೀಕರಿಸಿದ್ದಾರೆ. ಮಂಗಳೂರಲ್ಲಿ ಸಂಭವಿಸಿದ ಬಾಂಬ್​ ಸ್ಪೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

    ಮಂಗಳೂರಿನಲ್ಲಿ ಆಟೋ ಸ್ಫೋಟ: ಪ್ರಯಾಣಿಕನೇ ತನಿಖೆಯ ಮೂಲ ವ್ಯಕ್ತಿ! ಅನುಮಾನ ಹುಟ್ಟಿಸಿದೆ ಪಂಪ್‌ವೆಲ್​ಗೆ ಪ್ರಯಾಣ

    ಮಂಗಳೂರಿನಲ್ಲಿ ಆಟೋ ಸ್ಫೋಟ ಪ್ರಕರಣ: ತುಮಕೂರಿನ ರೈಲ್ವೆ ಸಿಬ್ಬಂದಿ ಹೆಸರಲ್ಲಿ ಆಧಾರ್​ ಕಾರ್ಡ್ ಪತ್ತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts