More

    ಬಿಜೆಪಿ ನನ್ನನ್ನು ‘ಸಿದ್ರಾಮುಲ್ಲಾಖಾನ್’ ಎಂದು ಕರೆದರೆ ಜನರು ಮಾತ್ರ ‘ಅನ್ನರಾಮಯ್ಯ’, ರೈತರಾಮಯ್ಯ ಎಂದು ಕರೆಯುತ್ತಾರೆ…

    ಬೆಂಗಳೂರು: ಸುಳ್ಳು, ಅಪಪ್ರಚಾರ ಮತ್ತು ಚಾರಿತ್ರ್ಯಹರಣವನ್ನೇ ರಾಜಕೀಯ ಪ್ರಚಾರದ ಸರಕನ್ನಾಗಿ ಮಾಡಿಕೊಂಡ ರಾಜ್ಯ ಬಿಜೆಪಿ ನನ್ನ ಹೆಸರಿಗೆ ಮುಸ್ಲಿಂ ಹೆಸರು ಸೇರಿಸಿ ನಡೆಸುತ್ತಿರುವ ಅಪಪ್ರಚಾರದಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

    ರಾಜ್ಯ ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎಂದು ಕರೆದಿದ್ದರು. ಇದು ಹಲವು ಟೀಕೆಗಳಿಗೂ ಕಾರಣವಾಗಿತ್ತು. ಇದೀಗ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಸಿದ್ರಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಂ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ. ಗೋವಿಂದ ಭಟ್ಟರ ಶಿಷ್ಯರಾದ ಶಿಶುನಾಳ ಷರೀಪ್, ಸಂತ ರಮಾನಂದರ ಶಿಷ್ಯರಾದ ಕವಿ ಕಬೀರರ ಪರಂಪರೆ ನಮ್ಮದು. ಆದ್ದರಿಂದ ಮುಸ್ಲಿಂ ಹೆಸರನ್ನು ನನ್ನ ಹೆಸರಿಗೆ ಜೋಡಿಸಿ ಜಾತ್ಯತೀತತೆಯ ನನ್ನ ನಂಬಿಕೆಯನ್ನು ಪುರಸ್ಕರಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

    ಮುಖ್ಯಮಂತ್ರಿಯಾಗಿ ಜನರಿಗಾಗಿ ಮಾಡಿರುವ ಸೇವೆಯನ್ನು ಗುರುತಿಸಿ ಬಹಳಷ್ಟು ಜನ ನನ್ನನ್ನು ‘ಅನ್ನರಾಮಯ್ಯ’, ರೈತರಾಮಯ್ಯ, ಕನ್ನಡ ರಾಮಯ್ಯ, ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನು ‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಅದಕ್ಕೂ ಖುಷಿಪಡುವೆ. ಹಿಂದೂ ಕೋಮುವಾದದಷ್ಟೇ ಸ್ಪಷ್ಟತೆ ಮತ್ತು ಬದ್ಧತೆಯಿಂದ ನಾನು ಮುಸ್ಲಿಂ ಮತ್ತಿತರ ಧರ್ಮಗಳ ಕೋಮುವಾದವನ್ನೂ ವಿರೋಧಿಸುತ್ತಾ ಬಂದಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

    ಬಿಜೆಪಿ ಪಕ್ಷದಂತೆ ರಾಜಕೀಯ ಕಾರಣಕ್ಕಾಗಿ ಒಳ್ಳೆಯವರು-ಕೆಟ್ಟವರು ಎಂಬ ಭೇದವಿಲ್ಲದೆ ಸಾರಾಸಗಟಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡ ಕೋಮುವಾದದ ರಾಜಕೀಯವನ್ನು ನಾನು ಮಾಡಿದವನಲ್ಲ. ಮುಸ್ಲಿಂ ಬಂಧುಗಳ ಮೂಲಭೂತ ಅವಶ್ಯಕತೆಗಳಾದ ಭದ್ರತೆ, ಶಿಕ್ಷಣ, ಆರೋಗ್ಯ, ಉದ್ಯೋಗಳನ್ನು ಒದಗಿಸಲು ಮುಂಗಡಪತ್ರದಲ್ಲಿ ನ್ಯಾಯಬದ್ಧವಾದ ಪಾಲನ್ನು ಎತ್ತಿಟ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದೇನೆ. ಈ ಬಗ್ಗೆ ನನಗೆ ಹೆಮ್ಮೆಯೂ ಇದೆ, ಅಭಿಮಾನವೂ ಇದೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts