More

    ‘ದೆಹಲಿಗೆ ಹೋಗಿ ಪ್ರಧಾನಿ ಮೋದಿಯವರನ್ನು ಭೇಟಿಯಾಗ್ತೀನಿ’: ಸಿದ್ದರಾಮಯ್ಯ ಹೀಗೆನ್ನಲು ಕಾರಣ ಏನು?

    Siddaramaiah said that he will meet Prime Minister Modi

    ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಸಮರ್ಪಕವಾಗಿ ಮಳೆಯಾಗದೆ ಭೀಕರ ಬರಪರಿಸ್ಥಿತಿ ಎದುರಾಗಿದೆ. ಸರ್ಕಾರ ಜನ-ಜಾನುವಾರುಗಳ ನೆರವಿಗೆ ಬರಬೇಕಿದ್ದು, ಬರಪರಿಹಾರ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲು ಮಂಗಳವಾರ (ಡಿ.19) ದೆಹಲಿಗೆ ತೆರಳುತ್ತಿರೋದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
    ಇದನ್ನೂ ಓದಿ: ಸಾಲ ಮನ್ನಾ ಯೋಜನೆ ಸದ್ಯಕ್ಕೆ ನಮ್ಮ ಮುಂದೆ ಇಲ್ಲ: ಕೆ.ಎನ್​. ರಾಜಣ್ಣ
    ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಪ್ರಧಾನ ಮಂತ್ರಿ ಮೋದಿಯವರನ್ನು ಈ ಕುರಿತು ಕೇಳಿಕೊಂಡಿದ್ದು, ಮಂಗಳವಾರ ಬೆಳಗ್ಗೆ 11 ಗಂಟೆಗೆ ಭೇಟಿಗೆ ಸಮಯ ನಿಗಧಿಪಡಿಸಿದ್ದಾರೆ. ದೆಹಲಿಗೆ ಹೋಗಿ ಭೇಟಿ ಮಾಡ್ತೀನಿ. ಬರ ಪರಿಹಾರ ವಿಚಾರವಾಗಿಯೇ ಅವರನ್ನು ಭೇಟಿ ಆಗೋಕೆ ಹೋಗುತ್ತಿದ್ದೇನೆ. ಬರಗಾಲದ ಬಗ್ಗೆ ಅವರ ಬಳಿ ಕೂಲಂಕುಷ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

    ಇದೇ ಅಲ್ಲದೆ, ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆ ಇದೆ, ಅದರಲ್ಲಿ ಭಾಗವಹಿಸುತ್ತೇನೆ. ಲೋಕಸಭೆ ಚುನಾವಣೆ ಬಗ್ಗೆಯೂ ಹೈಕಮಾಂಡ್ ಜತೆ ಚರ್ಚೆ ಮಾಡುತ್ತೇನೆ. ನಿಗಮ-ಮಂಡಳಿ ನೇಮಕಾತಿ ಬಗ್ಗೆಯೂ ಹೈಕಮಾಂಡ್ ಜತೆ ಚರ್ಚೆ ಮಾಡುವುದಾಗಿ ತಿಳಿಸಿದರು.

    ಇನ್ನೂ ಕೇರಳದಲ್ಲಿ ಕರೋನ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಕೇರಳದಲ್ಲಿ ಕೇಸ್ ಹೆಚ್ಚಳ ಆಗ್ತಿದೆ. ನಮ್ಮ ಆರೋಗ್ಯ ಸಚಿವರಿಗೆ ಸಭೆ ಮಾಡಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

    ‘ನಾಯಿ, ನರಿ ಬೊಗಳಿದರೆ ಇತಿಹಾಸ ಬದಲಾಗುವುದೆ?’: ನಟ ಜಗ್ಗೇಶ್​ ಟ್ವೀಟ್​ ವೈರಲ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts