ಎಲ್ಲರಿಗೂ ಟಿಕೆಟ್‌ ಕೊಡಕ್ಕಾಗಲ್ಲ… ಗೆಲ್ಲುವ ಅಭ್ಯರ್ಥಿಗೆ ಮಾತ್ರ ಟಿಕೆಟ್! ನಮ್ಮ ಗುರಿ ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವುದು

siddaramaiah
Published on

ಗದಗ: ಎಲ್ಲರಿಗೂ ಟಿಕೆಟ್‌ ಕೊಡಕ್ಕಾಗಲ್ಲ... ಗೆಲ್ಲುವ ಅಭ್ಯರ್ಥಿಗೆ ಮಾತ್ರ ಟಿಕೆಟ್... ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಗದಗ ಜಿಲ್ಲೆ ಶಿರಹಟ್ಟಿ ಪಟ್ಟಣದಲ್ಲಿ ಪ್ರಜಾಧ್ವನಿ ಸಮಾವೇಶದ ವೇಳೆ ಟಿಕೆಟ್ ಆಕಾಂಕ್ಷಿ ಪ್ರಕಾಶ್ ಕುರಿ ಬೆಂಬಲಿಗರ ಘೋಷಣೆಗೆ ಸಿದ್ದರಾಮಯ್ಯ ಗರಂ ಆದ ಸನ್ನಿವೇಶ ಎದುರಾಯಿತು.

ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ 14 ಜನರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಅದರಲ್ಲಿ ಗೆಲ್ಲುವಂತ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡುತ್ತೇವೆ. ಟಿಕೆಟ್ ಸಿಕ್ಕಿಲ್ಲ ಎಂದು ಕಾಲೆಳೆಯುವ ಕೆಲಸ ಮಾಡಬಾರದು. ನಮ್ಮ ಉದ್ದೇಶ ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವುದಾಗಿದೆ. ಪಕ್ಷಕ್ಕಾಗಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಸಿದ್ದರಾಮಯ್ಯ ಮಾತನಾಡುತ್ತಾ, ರಾಜ್ಯದಲ್ಲಿ ಭ್ರಷ್ಟ ಕೋಮುವಾದಿ ಪಕ್ಷ ಆಡಳಿತದಲ್ಲಿದೆ. ಬಿಜೆಪಿ ದಲಿತರ, ಹಿಂದುಳಿದವರ ವಿರೋಧಿಯಾಗಿದೆ. ಈ ಬಾರಿ ಬಿಜೆಪಿಯನ್ನು ಮನೆಗೆ ಕಳುಹಿಸುವುದುಕ್ಕೆ ಜನರು ಕಾಯುತ್ತಿದ್ದಾರೆ. 40 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ಬಿಜೆಪಿಯಷ್ಟು ಭ್ರಷ್ಟ ಸರಕಾರವನ್ನು ಕಂಡಿಲ್ಲ ಎಂದು ಕಿಡಿಕಾರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net