More

    ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ: ಸಿದ್ದರಾಮಯ್ಯ

    ಬೆಂಗಳೂರು: ಡಿ.ಕೆ ಶಿವಕುಮಾರ್‌,ಸಿದ್ದರಾಮಯ್ಯ ಇಬ್ಬರಿಗೂ ಸಿಎಂ ಆಗಬೇಕೆಂಬ ಬಯಕೆ ಇತ್ತು. ಇಬ್ಬರ ಜತೆ ಕಾಂಗ್ರೆಸ್​​ ನಾಯಕರು ಮಾತುಕತೆ ನಡೆಸಿ ಒಂದು ನಿರ್ಧಾರಕ್ಕೆ ಬಂದಿದ್ದಾರೆ. ಮುಖ್ಯಮಂತ್ರಿ ಹುದ್ದೆಯ ಹಗ್ಗ ಜಗ್ಗಾಟದಲ್ಲಿ ಕೊನೆಗೂ ಸಿದ್ದರಾಮಯ್ಯ ಪಾಲಾಗಿದೆ. ಡಿಸಿಎಂ ಸ್ಥಾನಕ್ಕೆ ಡಿ.ಕೆ ಶಿವಕುಮಾರ್​​ ಅವರ ಹೆಸರನ್ನು ಅಧಿಕೃತ ಎಂದು ಘೋಷಣೆ ಮಾಡಲಾಗಿದೆ.

    ಕರ್ನಾಟಕ ಮುಖ್ಯ ಮಂತ್ರಿ ಸ್ಥಾನಕ್ಕೆ ತಮ್ಮ ಹೆಸರು ಅಧಿಕೃತವಾಗಿ ಘೋಷಣೆಯಾಗುತ್ತಿದ್ದಂತೆ, ಸಿದ್ದರಾಮಯ್ಯ ಅವರು ಟ್ವೀಟ್​​ ಮಾಡಿ ಸಂತೋಷ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಆಟೋ ರಿಕ್ಷಾಕ್ಕೆ ಡಿಕ್ಕಿಯಾದ ನಿಂಬೆಹಣ್ಣು ತುಂಬಿದ ಟ್ರಕ್; 6 ಮಹಿಳಾ ಕಾರ್ಮಿಕರು ಮೃತ್ಯು, 6 ಮಂದಿ ಗಂಭೀರ

    ಟ್ವೀಟ್​​​ನಲ್ಲಿ ಏನಿದೆ?: ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಟ್ವೀಟ್​​ ಮಾಡಿದ್ದಾರೆ.

    ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ ಹಾಗೂ ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಕರ್ನಾಟಕದ ನೂತನ ಮುಖ್ಯಮಂತ್ರಿಯನ್ನು ಘೋಷಣೆ ಮಾಡಿದರು. ಶನಿವಾರ ಮಧ್ಯಾಹ್ನ 12.30ಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಏಕಮಾತ್ರ ಉಪಮುಖ್ಯಮಂತ್ರಿಯಾಗಿ ನೇಮಕವಾಗಿದ್ದಾರೆ.

    ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು; ಡಾ.ಜಿ ಪರಮೇಶ್ವರ್​​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts