More

    ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ಮಾಡಿಲ್ಲ ಅಂದ್ರೆ ನಾವು ಮಾಡ್ತೀವಿ; ಮಾಜಿ ಸಿಎಂ ಸಿದ್ದರಾಮಯ್ಯ

    ಬೆಳಗಾವಿ: ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಏಳನೇ ವೇತನ ಆಯೋಗ ಜಾರಿ ಮಾಡಬೇಕಿತ್ತು. ಸರ್ಕಾರಕ್ಕೆ ಜಾರಿ ಮಾಡಲು ಇಚ್ಛಾ ಶಕ್ತಿ ಇಲ್ಲ. ಸುಳ್ಳು ಹೇಳಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ಏಳನೇ ವೇತನ ಜಾರಿಗೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆ ಬೆಳಗಾವಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಾ, ಬಜೆಟ್​ನಲ್ಲಿ ಏಳನೇ ವೇತನ ಆಯೋಗ ಜಾರಿಗೊಳಿಸಲು ಅಗತ್ಯ ಇರುವಷ್ಟು ದುಡ್ಡು ಮೀಸಲಿಟ್ಟಿಲ್ಲ. ಕೂಡಲೇ ಮದ್ಯಂತರ ವರದಿ ಪಡೆದು ಏಳನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ಹೇಳಿದರು.

    ಇದನ್ನೂ ಓದಿ: ಗಡ್ಡ, ಮೀಸೆ ಟ್ರಿಮ್; ಹೊಸ ಲುಕ್​ನೊಂದಿಗೆ ಕೇಂಬ್ರಿಡ್ಜ್ ವಿವಿಯಲ್ಲಿ ರಾಹುಲ್ ಗಾಂಧಿ ಉಪನ್ಯಾಸ

    ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ಏಳನೇ ವೇತನ ಆಯೋಗ ಜಾರಿ ಮಾಡಬೇಕು. ಇಲ್ಲದೇ ಹೋದಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಜಾರಿ ಮಾಡುತ್ತೇವೆ. ಐದು ವರ್ಷಗಳ ಹಿಂದೆ ನೌಕರರಿಗೆ ಆರನೇ ವೇತನ ಆಯೋಗ ನಾನು ಮಾಡಿದ್ದೆ. ಆಗಲೂ ವಿಧಾನಸಭೆ ಚುನಾವಣೆ ಸಮೀಪದಲ್ಲೇ ನಾವು ಇದ್ದೆವು. ರಾಜ್ಯ ಬಿಜೆಪಿ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

    ಇದನ್ನೂ ಓದಿ: PHOTOS |ಮಾಲ್ಡೀವ್ಸ್ ಪ್ರವಾಸದಲ್ಲಿ ಕಾಂತಾರ ಬೆಡಗಿ; ಕಡಲ ಕಿನಾರೆಯಲ್ಲಿ ಸಪ್ತಮಿ ಗೌಡ ಎಂಜಾಯ್…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts