ಕುಂದಗೋಳ ಹಾಗೂ ಚಿಂಚೋಳಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಗೆಲ್ಲಲಿದೆ: ಸಿದ್ದರಾಮಯ್ಯ

ಹುಬ್ಬಳ್ಳಿ: ಕುಂದಗೋಳ ಮತ್ತು ಚಿಂಚೋಳಿ ಎರಡೂ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮೇ. 14, 15, 16 ಮತ್ತು 17 ರಂದು ನಾನು ಇಲ್ಲೇ ವಾಸ್ತವ್ಯ ಹೂಡುತ್ತೇನೆ. ಪಕ್ಷದ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಸ್ಥಳೀಯ ಮುಖಂಡರ ಜತೆ ಸೇರಿ ಪ್ರಚಾರ ಮಾಡುತ್ತೇನೆ. ಇಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್​ ಅವರ ಆಟ ನಡೆಯುವುದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಶಿವಳ್ಳಿ ಕುಟುಂಬದಿಂದ ಹಣ ಪಡೆದು ಟಿಕೆಟ್​ ನೀಡಿದ್ದಾರೆ ಎಂದು ಶಿವಾನಂದ ಬೆಂತೂರ ಆರೋಪ ಮಾಡಿದ್ದಾರೆ. ಶಿವಳ್ಳಿ ಕುಟುಂಬವೇ ಕಷ್ಟದಲ್ಲಿದೆ. ಆದರೆ, ಇವರು ಹೀಗೆ ಆರೋಪ ಮಾಡಿದ್ದಾರೆ. ಉಗೀರಿ ಅವನ ಮುಖಕ್ಕೆ ಎಂದು ಶಿವಾನಂದ ಬೆಂತೂರ ವಿರುದ್ಧ ಸಿದ್ದರಾಮಯ್ಯ ಕಿಡಿ ಕಾರಿದರು.

ಕಾಂಗ್ರೆಸ್​ ಪ್ರಚಾರ ಆರಂಭ

ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್​ ಅಧಿಕೃತವಾಗಿ ಪ್ರಚಾರ ಆರಂಭಿಸಿದೆ. ಕುಂದಗೋಳ ತಾಲ್ಲೂಕಿನ ಸಂಶಿ ಗ್ರಾಮದಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಡಿಕೆ ಶಿವಕುಮಾರ, ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ ಭಾಗಿಯಾಗಿದ್ದಾರೆ.

Leave a Reply

Your email address will not be published. Required fields are marked *