More

    ಖರ್ಗೆಗೆ ರಾಜ್ಯಸಭೆ ಟಿಕೆಟ್ ಕೊಡುವಂತೆ ಹೈಕಮಾಂಡ್‌ಗೆ ನಾನೇ ಶಿಫಾರಸು ಮಾಡಿದ್ದೆ: ಸಿದ್ದರಾಮಯ್ಯ

    ಮೈಸೂರು: ರಾಜ್ಯಸಭಾ ಚುನಾವಣೆಗೆ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಬೇಕೆಂದು ಹೈಕಮಾಂಡ್‌ಗೆ ನಾನೇ ಮನವಿ ಮಾಡಿದ್ದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

    ಖರ್ಗೆ ಶಾಸಕರಾಗಿ, ಸಂಸದರಾಗಿ, ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಈ ಕಾರಣಕ್ಕೆ ಅವರನ್ನು ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕೆಂದು ಹೈಕಮಾಂಡ್‌ಗೆ ಮನವಿ ಮಾಡಿದ್ದೆ. ಈ ವಿಚಾರವಾಗಿ ಖರ್ಗೆ ಅವರೊಂದಿಗೂ ಮಾತನಾಡಿದ್ದೇನೆ. ಅವರೂ ಸ್ಪರ್ಧೆಗೆ ಸಹಮತ ವ್ಯಕ್ತಪಡಿಸಿದ್ದರು ಎಂದು ಸುದ್ದಿಗಾರರಿಗೆ ತಿಳಿಸಿದರು.

    ಇದನ್ನೂ ಓದಿ ಸಿದ್ದರಾಮಯ್ಯನವರಿಗೆ ಕುಡುಕನ ಕಾಟ

    ಗೆಲುವು ಸಾಧಿಸಲು 46 ಮತಗಳ ಅವಶ್ಯಕತೆ ಇದೆ. ಆದರೆ, ನಮ್ಮ ಬಳಿ ಇರುವ ಹೆಚ್ಚುವರಿ ಮತಗಳನ್ನು ಯಾರಿಗೆ ಚಲಾಯಿಸಬೇಕೆಂಬ ಕುರಿತು ತೀರ್ಮಾನ ಕೈಗೊಂಡಿಲ್ಲ. ಈ ಕುರಿತು ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ. ಈ ವಿಚಾರವನ್ನು ಮಾಧ್ಯಮದ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

    ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಮಾಜಿ ಪ್ರಧಾನಿ ದೇವೇಗೌಡರು ಸ್ಪರ್ಧಿಸುವ ಸಾಧ್ಯತೆ ಇದೆ. ಅವರಿಗೆ ನಮ್ಮ ಪಕ್ಷದಿಂದ ಬೆಂಬಲ ನೀಡುವ ಕುರಿತು ಈವರೆಗೆ ಯಾವುದೇ ಚರ್ಚೆಯಾಗಲಿ, ತೀರ್ಮಾನವಾಗಲಿ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

    ಇದನ್ನೂ ಓದಿ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಸಿದ್ದರಾಮಯ್ಯ ಆಪ್ತರ ಬೇಸರ; ಕಾಂಗ್ರೆಸ್​​ನಲ್ಲೂ ಅಸಮಾಧಾನದ ಹೊಗೆ

    ಇಂದಿರಾ ಕ್ಯಾಂಟೀನ್‌ನಲ್ಲಿ ಅವ್ಯವಹಾರ: ಸಿದ್ದರಾಮಯ್ಯ, ಜಾರ್ಜ್ ವಿರುದ್ಧದ ಕೇಸ್ ರದ್ದು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts