More

  ಪ್ರಜ್ವಲ್​ ಎಲ್ಲೇ ಇದ್ದರೂ ಹಿಡಿದು ತರುವುದು ನಮ್ಮ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

  ಬಾಗಲಕೋಟೆ: ರಾಷ್ಟ್ರ ರಾಜಕಾರಣದಲ್ಲಿ ತೋವ್ರ ಗದ್ದಲ ಎಬ್ಬಿಸಿರುವ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ತನಿಖಾ ತಂಡಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಪ್ರಜ್ವಲ್​ ಯಾವ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ ಅದು ನಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ.

  ಬಾಗಲಕೋಟೆಯಲ್ಲಿ ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್​ ರೇವಣ್ಣ ಅವರನ್ನು ಕೇಂದ್ರ ಸರ್ಕಾರವೇ ರಕ್ಷಿಸುತ್ತಿದೆ. ಆತನ ವಿರುದ್ಧ ಯಾಕೆ ಕ್ರಮ ಜರುಗಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

  ಇದನ್ನೂ ಓದಿ: ರಾಹುಲ್​ ಗಾಂಧಿ ಪ್ರಧಾನಿಯಾದರೆ ದೇಶವನ್ನು ಫಿಟ್​ ಆಗಿಡಲಿದ್ದಾರೆ: ನಟ ಶಿವರಾಜ್​ಕುಮಾರ್

  ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್​ ರೇವಣ್ಣ ಎಲ್ಲೇ ಇದ್ದರೂ ಹಿಡಿದು ತರುತ್ತೇವೆ. ಪ್ರಜ್ವಲ್​ ರೇವಣ್ಣ ಪಾಸ್​ಪೋರ್ಟ್​ ರದ್ಧತಿಗೆ ಸಂಬಂಧಿಸಿದಂತೆ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಆದರೆ, ಅವರು ಪಾಸ್​ಪೋರ್ಟ್​ ರದ್ದು ಮಾಡುವ ಬದಲು ರಕ್ಷಣೆ ಮಾಡುತ್ತಿದ್ದಾರೆ. ಪ್ರಜ್ವಲ್ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡರು. ಈಗ ಯಾಕೆ ಕ್ರಮ ವಹಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

  ಚುನಾವಣೆ ಪ್ರಚಾರದ ವೇಳೆ ಎಚ್​.ಡಿ. ಕುಮಾರಸ್ವಾಮಿ ಅವರು ನನ್ನ ಮಗ ನಿಖಿಲ್​ ಬೇರೆ ಅಲ್ಲ ಪ್ರಜ್ವಲ್​ ಬೇರೆ ಅಲ್ಲ ಎಂದಿದ್ದರು. ಆದರೆ, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅವರು ಅವರ ಕುಟುಂಬವೇ ಬೇರೆ ನಮ್ಮ ಕುಟುಂಬ ಬೇರೆ ಅಂತಿದ್ದಾರೆ. ಇದು ಹೇಗೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts