More

    ಭಾರತ ಜೋಡೋ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನಡೆಸುತ್ತಿರುವ ಭಾರತ್​ ಜೋಡೋ ನ್ಯಾಯ್​ ಯಾತ್ರೆಯನ್ನು ಅಸ್ಸಾಂನ ಗುವಾಹಟಿಯಲ್ಲಿ ತಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು ಎಂದು ಹೇಳಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ರಾಹುಲ್ ಗಾಂಧಿ ಅವರ ಜೊತೆ ನಾನಿದ್ದೇನೆ, ನನ್ನಂತಹ ಕೋಟ್ಯಂತರ ಭಾರತೀಯರಿದ್ದಾರೆ. ಅನ್ಯಾಯದ ಕಾಡ್ಗಿಚ್ಚನ್ನು ಆರಿಸಿ, ನ್ಯಾಯದ ಹಣತೆ ಬೆಳಗುವವರೆಗೆ ನಾವು ವಿರಮಿಸುವುದಿಲ್ಲ ಎಂದು ಹೇಳಿದ್ದಾರೆ.

    ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು. ನಮ್ಮ ನಾಯಕರಾದ ರಾಹುಲ್​ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ. ಗೂಂಡಾಗಳನ್ನು ಬಿಟ್ಟು ಕಲ್ಲು ಹೊಡೆಸಿ, ಬೆದರಿಕೆ ಒಡ್ಡುವ ಮೂಲಕ ಭಾರತೀಯರ ನ್ಯಾಯದ ಕೂಗನ್ನು ಅಡಗಿಸಬಹುದು ಎಂದು ಭಾವಿಸಿದ್ದರೆ ಅದು ನಿಮ್ಮ ಭ್ರಮೆ ಎಂದು ಎಚ್ಚರಿಸಿದ್ದಾರೆ.

    ಇದನ್ನೂ ಓದಿ: ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ; ರಾಜ್ಯ ಸರ್ಕಾರದ ವತಿಯಿಂದ ಪ್ರಬಂಧ ಸ್ಫರ್ಧೆ ಆಯೋಜಿಸಲು ಸಿಎಂ ಸೂಚನೆ

    ಪ್ರಧಾನಿ ನರೇಂದ್ರ ಮೋದಿ ಅವರೇ, ರಾಹುಲ್ ಗಾಂಧಿ ಅವರ ಜೊತೆ ನಾನಿದ್ದೇನೆ, ನನ್ನಂತಹ ಕೋಟ್ಯಂತರ ಭಾರತೀಯರಿದ್ದಾರೆ. ಅನ್ಯಾಯದ ಕಾಡ್ಗಿಚ್ಚನ್ನು ಆರಿಸಿ, ನ್ಯಾಯದ ಹಣತೆ ಬೆಳಗುವ ವರೆಗೆ ನಾವು ವಿರಮಿಸುವುದಿಲ್ಲ. ದ್ವೇಷ, ಹಿಂಸೆ, ಅಧರ್ಮ, ಅಸತ್ಯಗಳನ್ನು ತಿರಸ್ಕರಿಸಿರುವ, ಸೌಹಾರ್ದ ಭಾರತ ಬಯಸುವ ಕೋಟ್ಯಂತರ ಮನಸುಗಳು ನಮ್ಮ ಜೊತೆಗಿವೆ.

    ಬುದ್ಧ, ಬಸವ, ಅಂಬೇಡ್ಕರರು ನಡೆದಾಡಿದ ಈ ನೆಲದಲ್ಲಿ ಪ್ರೀತಿ, ಬಾಂಧವ್ಯಕ್ಕೆ ಸಾವಿಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ನಮ್ಮ ನಾಯಕರಾದ ರಾಹುಲ್​ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆಗೆ ಮೇಘಾಲಯದ ಜನರಿಂದ ದೊರೆತ ಅಭೂತಪೂರ್ವ ಸ್ಪಂದನೆ ಭಾರತದ ಭವಿಷ್ಯದ ಸೂಚಕದಂತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts