ಎರಡ್ಮೂರು ವರ್ಷಗಳಿಂದ ಸುಮ್ಮನಿದ್ದ ಗುತ್ತಿಗೆದಾರರು ಈಗ ಯಾಕೆ ಆರೋಪಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Siddaramaiah
ಸಾಂದರ್ಭಿಕ ಚಿತ್ರ
Published on

ಬೆಳಗಾವಿ: ಕಳೆದ ಮೂರು ವರ್ಷಗಳಿಂದ ಬಿಲ್​ ಕೊಡದಿದ್ದಾಗ ಸುಮ್ಮನಿದ್ದ ಗುತ್ತಿಗೆದಾರರು ಈಗ ಯಾಕೆ ಆರೋಪ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಅವರಿಗೆ ನೈತಿಕತೆ ಇದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಈ ಕುರಿತು ಮಾತನಾಡಿದ ಸಿಎಂ ಒಳ್ಳೆಯ ಕೆಲಸ ಮಾಡಿದವರಿಗೆ ನಾವು ತೊಂದರೆ ಕೊಡುವುದಿಲ್ಲ. ಆದರೆ, ಕಳಪೆ ಕಾಮಗಾರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಸುಮ್ಮನಿದ್ದವರು ಈಗ ಯಾಕೆ ಹೋರಾಟ ಮಾಡುತ್ತಿದ್ದಾರೆ

ಗುತ್ತಿಗೆದಾರರ ಬಿಲ್​ ಬಾಕಿ ಉಳಿದಿರುವುದು ಯಾರ ಸರ್ಕಾರದ ಅವಧಿಯದ್ದು. ಹಿಂದಿನ ಸರ್ಕಾರ ಗುತ್ತಿಗೆದಾರರ ಬಿಲ್​​ಗಳನ್ನು ಬಾಕಿ ಉಳಿಸಿಕೊಂಡಿದೆ. ಕಳೆದ ಎರಡ್ಮೂರು ವರ್ಷಗಳಿಂದ ಬಿಲ್​ ಯಾಕೆ ಪಾವತಿಸಿಲ್ಲ. ಕಳೆದ ಮೂರು ವರ್ಷಗಳಿಂದ ಬಿಲ್​ ಕೊಡದಿದ್ದಾಗ ಸುಮ್ಮನಿದ್ದ ಗುತ್ತಿಗೆದಾರರು ಈಗ ಯಾಕೆ ಆರೋಪ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

Siddaramaiah

ನಾವು ಅಧಿಕಾರಕ್ಕೆ ಬಂದು ಇನ್ನೂ ಮೂರು ತಿಂಗಳೂ ಕೂಡ ಕಳೆದಿಲ್ಲ. ಶೇ. 40ರಷ್ಟು ಕಮಿಷನ್​ ಬಗ್ಗೆ ನಾವೇ ಆರೋಪಿಸಿದ್ದೆವು. ಗುತ್ತಿಗೆದಾರರು ಕೈಗೊಂಡ ಕಾಮಗಾರಿಗಳ ಕುರಿತು ತನಿಖೆ ನಡೆಸುವಂತೆ ನಾಲ್ಕು ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಅಧಿಕಾರಿಗಳು ನೀಡಿದ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು ಮರುತನಿಖೆ ಮಾಡಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಕಾನೂನು ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net