More

    ಪಿಯುಸಿವರೆಗೂ ಆನ್‌ಲೈನ್ ಶಿಕ್ಷಣ ರದ್ದಾಗುತ್ತಾ? ಸರ್ಕಾರಕ್ಕೆ ಸಿದ್ದು ಸಲಹೆ ಇಲ್ಲಿದೆ…

    ಮೈಸೂರು: ಪಿಯುಸಿವರೆಗೂ ಆನ್‌ಲೈನ್ ಶಿಕ್ಷಣ ರದ್ದಾಗಬೇಕು ಎಂದು ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದರು.

    ನಾನು ಮೊದಲಿನಿಂದಲೂ ಆನ್​ಲೈನ್ ಶಿಕ್ಷಣ ಪದ್ಧತಿಗೆ ವಿರೋಧ ಮಾಡುತ್ತಿದ್ದೇನೆ. ಸರ್ಕಾರ 5 ನೇ ತರಗತಿವರೆಗೆ ಆನ್​ಲೈನ್ ಶಿಕ್ಷಣ ರದ್ದು ಮಾಡಿದೆ. ಇದು ಸರಿಯಾದ ಕ್ರಮ. ಆದರೆ, ಪಿಯುಸಿವರೆಗೂ ಆನ್​ಲೈನ್ ಶಿಕ್ಷಣ ರದ್ದಾಗಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದರು.

    ಇದನ್ನೂ ಓದಿರಿ ಕೆಆರ್​ಎಸ್ ಡ್ಯಾಂ ಬಳಿ ಗುಂಡು-ತುಂಡಿನ ಭರ್ಜರಿ ಪಾರ್ಟಿ… ಕರೊನಾ ಭೀತಿಗೂ ಕ್ಯಾರೆ ಎನ್ನದ ಜನರಿವರು!

    ಮಕ್ಕಳಿಗೆ ನೇರವಾಗಿ ತರಗತಿಯಲ್ಲೇ ಭೋದನೆ ಮಾಡಬೇಕು. ಆ ಕಾರಣಕ್ಕಾಗಿ ಅಕ್ಟೋಬರ್‌‌ವರೆಗೆ ಶಾಲೆ ತೆರೆಯಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು. ಖಾಸಗಿ ಶಾಲೆಗಳ ಶುಲ್ಕ ಕಡಿಮೆ ಮಾಡುವ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರವನ್ನು ಸರ್ಕಾರ ತೀರ್ಮಾನ ಮಾಡಬೇಕು ಎಂದರು.

    ಇದನ್ನೂ ಓದಿರಿ ರಾತ್ರೋರಾತ್ರಿ ಕುಸಿದ ದೇವಾಲಯ ಗೋಪುರ! ಇದು ಅಪಾಯದ ಮುನ್ಸೂಚನೆಯೇ..?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts