ಸಿದ್ದರಾಮಯ್ಯಗೆ ಸಿಎಂ ಸ್ಥಾನ ಖಚಿತ; ಡಿ.ಕೆ ಶಿವಕುಮಾರ್ ತವರು ಜಿಲ್ಲೆಯಲ್ಲಿ ಹೈ ಅಲರ್ಟ್!

dks
Published on

ರಾಮನಗರ: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಘೋಷಣೆಯಾದ ಹಿನ್ನೆಲೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಜಿಲ್ಲೆಯಲ್ಲಿ ಪೊಲೀಸರಿಗೆ ಅಲರ್ಟ್ ಆಗಿರಲು ಉನ್ನತ ಅಧಿಕಾರಿಗಳು ಸೂಚಿಸಿದ್ದಾರೆ.

ಜಿಲ್ಲೆಗೆ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ಬೆಂಗಳೂರು, ಮೈಸೂರಿನಿಂದ ಆರು ಕೆಎಸ್ ಆರ್​​ಪಿ ತುಕಡಿ ಆಗಮಿಸಿದ್ದಾರೆ. ಡಿಕೆಶಿಗೆ ಸಿಎಂ ಸ್ಥಾನ ತಪ್ಪಿರುವ ಹಿನ್ನೆಲೆ ಗಲಾಟೆ, ಪ್ರತಿಭಟನೆ ಸಾಧ್ಯತೆ ಇದೆ. ಹೀಗಾಗಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರಿಂದ ಅಲರ್ಟ್ ಆಗಿರುವಂತೆ ಹೇಳಲಾಗಿದೆ.

ಯಾವುದೇ ರೀತಿಯ ಪ್ರತಿಭಟನೆ ನಡೆಸಿ ಪಕ್ಷಕ್ಕೆ ಮುಜುಗರವಾಗುವಂತೆ ನಡೆದುಕೊಳ್ಳದಂತೆ ಬೆಂಬಲಿಗರಿಗೆ ಡಿಕೆ ಬ್ರದರ್ಸ್ ಮನವಿ ಮಾಡಿಕೊಂಡಿದ್ದಾರೆ. ಪೋನ್ ಮೂಲಕ ಬಂದಿರುವ ಈ ಸೂಚನೆ ಹಿನ್ನೆಲೆಯಲ್ಲಿ, ಸದ್ಯಕ್ಕೆ ಡಿಕೆ ಅಭಿಮಾನಿಗಳು ಸೈಲೆಂಟ್ ಆಗಿದ್ದಾರೆ.

ನಾಳೆ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಕಾರ್ಯಕ್ರಮ ನಗರದ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿದೆ. ಸಿಎಂ ಸ್ಥಾನ ಖಚಿತವಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ದೆಹಲಿಯಿಂದ ಬೆಂಗಳೂರಿಗೆ ತೆರಳಲಿದ್ದಾರೆ. ದೆಹಲಿ ಪ್ರವಾಸ ಫಲ ನೀಡಿದ್ದು, ಸಂಜೆ ಒಳಗೆ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ ಬರಲಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net