ಮೈತ್ರಿ ಮುಂದುವರಿದರೆ ಕಾಂಗ್ರೆಸ್​ ಕಷ್ಟ ಎಂದು ರಾಹುಲ್ ಗಾಂಧಿ​ಗೆ ಸಿದ್ದರಾಮಯ್ಯ ತಿಳಿಸಿದ್ದಾರೆ: ಉಮೇಶ್​ ಜಾಧವ್​

ಕಲಬುರಗಿ: ಮೈತ್ರಿ ಸರಕಾರದ ಕಿತ್ತಾಟದಿಂದಾಗಿ ಸರಕಾರ ಬಿದ್ದು ಹೋಗಲಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಲಿದ್ದಾರೆ. ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಜೊತೆ ಮೈತ್ರಿ ಮುಂದುವರೆದರೆ ಕಾಂಗ್ರೆಸ್​ಗೆ ನಷ್ಟವಾಗಲಿದೆ ಎಂದು ರಾಹುಲ್‌ ಗಾಂಧಿಗೆ ಹೇಳಿದ್ದಾರೆ ಎಂದು ಮಾಜಿ ಶಾಸಕ ಡಾ.ಉಮೇಶ್​ ಜಾಧವ್ ಹೇಳಿದರು.

ಕಲಬುರಗಿಯಲ್ಲಿ ಮಾತನಾಡಿದ ಅವರು, ಆರು ವರ್ಷ ನಾನು ಜನರ ಸೇವೆ ಮಾಡಿದ್ದು, ನಾನು ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ, ಚಿಂಚೋಳಿ ಕ್ಷೇತ್ರದ ಉಪಚುನಾವಣೆಯಲ್ಲಿ ಡಾ.ಅವಿನಾಶ್ ಜಾಧವ್ 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದರು.

ಪ್ರಧಾನಿ ಮೋದಿ, ಬಿ.ಎಸ್.ಯಡಿಯೂರಪ್ಪ ಅವರ ಆಡಳಿತ, ಅದೆ ರೀತಿ ನನ್ನ ಅವಧಿಯಲ್ಲಿ ಆದಂತಹ ಅಭಿವೃದ್ಧಿ ಕಾರ್ಯಗಳನ್ನು ಜನತೆ ಮೆಚ್ಚಿ ಬಿಜೆಪಿಗೆ ಮತ ಹಾಕಿದ್ದಾರೆ, ಚಿಂಚೋಳಿ ಫಲಿತಾಂಶದಿಂದ ಹೈದರಾಬಾದ್​ ಕರ್ನಾಟಕ ಭಾಗದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂದರು. (ದಿಗ್ವಿಜಯ ನ್ಯೂಸ್​)

One Reply to “ಮೈತ್ರಿ ಮುಂದುವರಿದರೆ ಕಾಂಗ್ರೆಸ್​ ಕಷ್ಟ ಎಂದು ರಾಹುಲ್ ಗಾಂಧಿ​ಗೆ ಸಿದ್ದರಾಮಯ್ಯ ತಿಳಿಸಿದ್ದಾರೆ: ಉಮೇಶ್​ ಜಾಧವ್​”

Leave a Reply

Your email address will not be published. Required fields are marked *