More

    ಎಚ್.ಡಿ. ಕುಮಾರಸ್ವಾಮಿ ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ; ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ: ಸಿಎಂ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಇದೀಗ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್​ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

    ಇದನ್ನೂ ಓದಿ: ಸದನದಲ್ಲಿ ಕೋಲಾಹಲ ಎಬ್ಬಿಸಿದ ಮಂಡ್ಯ ಚಾಲಕನ ಆತ್ಮಹತ್ಯೆ ಯತ್ನ ಕೇಸ್​: ಸರ್ಕಾರಕ್ಕೆ ಎಚ್​ಡಿಕೆ, ಬೊಮ್ಮಾಯಿ ಚಾಟಿ

    ಎಚ್​​ಡಿಕೆ ವಿರುದ್ಧ ಸಿಎಂ ಮಾಡಿರುವ ಟ್ವೀಟ್​ ಹೀಗಿದೆ, “ಮಾಜಿ ಮುಖ್ಯಮಂತ್ರಿ ಎಚ್​​.ಡಿ. ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ. ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ತಮ್ಮ ರಾಜಕೀಯ ಜೀವನದಲ್ಲಿ ಅವರು ಈವರೆಗೆ ಮಾಡಿರುವ ಯಾವುದೇ ಒಂದು ಆರೋಪವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರ? ಕತ್ತಲಲ್ಲಿ ನಿಂತು ಕಲ್ಲೆಸೆದು ಓಡಿಹೋಗುತ್ತಾರೆ. ಅವರನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅಗತ್ಯವಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

    “ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ವರ್ಗಾವಣೆ ಸಹಜ ಪ್ರಕ್ರಿಯೆ. ಹೊಸ ಸರ್ಕಾರ ಬಂದಾಗ ಆಡಳಿತದ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲೇಬೇಕಾಗುತ್ತದೆ. ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ವರ್ಗಾವಣೆಯಾಗಿರಲಿಲ್ಲ. ಈಗ ಆ ಸಾಮಾನ್ಯ ವರ್ಗಾವಣೆಗಳೂ ನಡೆಯುತ್ತಿದೆ. ಇದು ನಮ್ಮಿಂದ ಶುರುವಾದುದಲ್ಲ, ಹಿಂದಿನ ಸರ್ಕಾರದಲ್ಲಿಯೂ ನಡೆದಿದೆ, ಮುಂದೆಯೂ ನಡೆಯುತ್ತದೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ವರ್ಗಾವಣೆ ನಡೆದಿರಲಿಲ್ಲವೇ? ಅವರೂ ಹಣ ಪಡೆದೇ ವರ್ಗಾವಣೆ ನಡೆಸಿದ್ದೇ?” ಎಂದು ಟ್ವೀಟ್​​ನಲ್ಲಿ ಪ್ರಶ್ನಿಸಿದ್ದಾರೆ.

    ಇದನ್ನೂ ಓದಿ: ಅಂತಾರಾಷ್ಟ್ರೀಯ ಚುಂಬನ ದಿನ: ಮಾನಸಿಕ, ದೈಹಿಕ ಆರೋಗ್ಯಕ್ಕೆ ಸಾಕಾ ಒಂದು ಮುತ್ತು…

    “ನಾನು ಮುಖ್ಯಮಂತ್ರಿಯಾಗಿದ್ದೇನೆ ಎಂದ ಮಾತ್ರಕ್ಕೆ ನನ್ನ ಪುತ್ರ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎನ್ನುವುದು ಕುಮರಸ್ವಾಮಿ ಅವರ ಕಲ್ಪನಾ ವಿಲಾಸ. ಇದೇ ವಾದವನ್ನು ಅವರಿಗೆ ಮತ್ತು ಅವರ ಕುಟುಂಬಕ್ಕೆ ಅನ್ವಯಿಸಬಹುದಾ? ಕುಮಾರಸ್ವಾಮಿ ಅಣ್ಣ ಸಚಿವರಾಗಿದ್ದರು, ಈಗ ಶಾಸಕ, ಇವರ ಪತ್ನಿ ಶಾಸಕಿಯಾಗಿದ್ದರು, ತಂದೆ ಪ್ರಧಾನಿಗಳಾಗಿದ್ದರು, ಅಣ್ಣನ ಮಗ ಸಂಸದ. ಎಚ್​​ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅವರ ಕುಟುಂಬದ ಸದಸ್ಯರೆಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ರಾ?” ಎಂದು ಸರಣಿ ಟ್ವೀಟ್​ ಮೂಲಕ ಎಚ್​ಡಿಕೆಯನ್ನು ಪ್ರಶ್ನಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts