More

    ಕೋರ್ಟ್​ಗಾದರೂ ದಾಖಲೆ ಸಲ್ಲಿಸಲೇಬೇಕಲ್ಲ; ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲು; ನೋಟಿಸ್​ಗೆ ಸ್ವಾಗತ

    ಬೆಂಗಳೂರು: ಕರೊನಾ ಚಿಕಿತ್ಸೆ ಹಾಗೂ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅಕ್ರಮ ನಡೆಸಿದ್ದನ್ನು ಪ್ರಶ್ನಿಸಿದ್ದಕ್ಕೆ ಲೀಗಲ್​ ನೋಟಿಸ್​ ನೀಡಿದ ಬಿಜೆಪಿ ಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

    ಈ ಪ್ರಕರಣದಲ್ಲಿ ನಾವೇ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆಂದಿದ್ದೇವು. ಆದರೆ, ಬಿಜೆಪಿಯವರು ನಮ್ಮ ಕೆಲಸವನ್ನು ಇನ್ನಷ್ಟು ಹಗುರ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

    ಇದನ್ನೂ ಓದಿ; ಜಗತ್ತಿನ ಮೊದಲ ಕರೊನಾ ಲಸಿಕೆ ರಷ್ಯಾದಲ್ಲಿ ಸಿದ್ಧ; ಅಕ್ಟೋಬರ್​ನಲ್ಲಿ ಎಲ್ಲರಿಗೂ ಲಭ್ಯ; ಸ್ಪುಟ್ನಿಕ್​ ಯಶಸ್ಸಿಗೆ ಹೋಲಿಕೆ

    ನಮಗೆ ನೀಡದ ದಾಖಲೆಗಳನ್ನು ನ್ಯಾಯಾಲಯಕ್ಕಾದರೂ ನೀಡಲೇಬೇಕಲ್ಲ, ಕೋರ್ಟ್​ನಲ್ಲಾದರೂ ನಮ್ಮನ್ನು ಎದುರಿಸಲೇಬೇಕಲ್ಲ ಎಂದು ಹೇಳಿದ್ದಾರೆ.

    ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿನ ಅಕ್ರಮಗಳನ್ನು ಬಹಿರಂಗವಾಗಿ ಪ್ರಶ್ನಿಸಿದ ನಂತರ ಲೂಟಿ ಕೊಂಚ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ಮೊತ್ತದ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ ಎಂದು ಮಾಜಿ ಸಿಎಂ ತಿಳಿಸಿದ್ದಾರೆ.

    ಇದನ್ನೂ ಓದಿ; 15ನೇ ವರ್ಷಕ್ಕೆ ಮದುವೆ, ಎರಡೂವರೆ ವರ್ಷದ ಮಗುವಿನ ತಾಯಿಯೀಗ ಪಿಯು ಪರೀಕ್ಷೆಯಲ್ಲಿ ಅಗ್ರ ಸಾಧಕಿ

    ಭ್ರಷ್ಟಾಚಾರಕ್ಕೆ ತಡೆಯೊಡ್ಡಿ, ಅವರ ಹೊಟ್ಟೆಗೆ ಕಲ್ಲು ಹಾಕಿದೆನಲ್ಲಾ ಎಂದು ಇವರಿಗೆ ನನ್ನ ಮೇಲೆ ಕೋಪ. ಹೀಗಾಗಗಿಯೇ ನನ್ನ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ.

    ಆರಂಭವಾಗಿದೆ ಕರೊನಾದ ಅಂತ್ಯಕಾಲ; ದೆಹಲಿ ಮುಂಚೂಣಿಯಲ್ಲಿ; ಏನಿದು ಆರ್​-ವ್ಯಾಲ್ಯೂ ಲೆಕ್ಕಾಚಾರ…?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts