More

    ಡಿಕೆಶಿ ಮೂಲೆಗುಂಪು ಮಾಡಲು ಸಿದ್ದರಾಮಯ್ಯ ಯತ್ನ

    ಹುಬ್ಬಳ್ಳಿ : ಕಾಂಗ್ರೆಸ್​ನಲ್ಲಿ ಎಲ್ಲವೂ ಸರಿ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕಚ್ಚಾಡುತ್ತಿದ್ದಾರೆ. ಹೆಚ್ಚಿನ ಉಪ ಮುಖ್ಯಮಂತ್ರಿಗಳ ಸ್ಥಾನ ಸೃಷ್ಟಿಸಿ ಡಿ.ಕೆ. ಶಿವಕುಮಾರ ಅವರನ್ನು ಮೂಲೆಗುಂಪು ಮಾಡುವ ತಂತ್ರ ಸಿದ್ದರಾಮಯ್ಯ ಅವರದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

    ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಲ್ಹಾದ ಜೋಶಿ, ಕಾನೂನಾತ್ಮಕವಾಗಿ ಡಿ.ಕೆ. ಶಿವಕುಮಾರ ಅವರಿಗೆ ತೊಂದರೆ ಕೊಡುವ ಪ್ರಯತ್ನವನ್ನು ಸಿಎಂ ಸಿದ್ದರಾಮಯ್ಯ ಪ್ರಾರಂಭದಿಂದಲೂ ಮಾಡುತ್ತಿದ್ದಾರೆ. ಆದರೆ, ಇದುವರೆಗೂ ಸಿದ್ದರಾಮಯ್ಯ ಸಫಲರಾಗಿರಲಿಕ್ಕಿಲ್ಲ. ಆದರೆ, ಪ್ರತ್ನವನ್ನಂತೂ ಮುಂದುವರೆಸಿದ್ದಾರೆ ಎಂದರು.

    ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಲೋಕಸಭೆ ಚುನಾವಣೆ ಎದುರಿಸಲು ಮುಂದಾಗಿದೆ. ಆದರೆ, ಈ ಸರ್ಕಾರಕ್ಕೇ ಗ್ಯಾರಂಟಿ ಇಲ್ಲ ಎಂದು ಟೀಕಿಸಿದರು.

    ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸದಿದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ ಎಂಬ ಶಾಸಕ ಎಸ್.ಆರ್. ಶ್ರೀನಿವಾಸ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪ್ರಲ್ಹಾದ ಜೋಶಿ, ಶಾಸಕ ಶ್ರೀನಿವಾಸ ಅವರು 20 ಕ್ಷೇತ್ರವೆಂದು ಏಕೆ ಹೇಳಿದ್ದಾರೋ ಗೊತ್ತಿಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಐದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲು ಸಾಧ್ಯವಿಲ್ಲ. ಹೀಗಾಗಿ, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕಾಗುತ್ತದೆ ಎಂದು ಹೇಳಿದರು.

    ಮಂಡ್ಯ ಕ್ಷೇತ್ರದ ಬಗ್ಗೆ ಯಾವುದೇ ಗೊಂದಲ ಇಲ್ಲ. ಈಗಾಗಲೇ ಬಿಜೆಪಿ ವರಿಷ್ಠರು ಸುಮಲತಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಒಂದೆರೆಡು ದಿನಗಳಲ್ಲಿ ಎಲ್ಲ ಸಮಸ್ಯೆ ಬಗೆಹರಿಯಲಿದೆ ಎಂದರು.

    ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಎಚ್.ಡಿ. ದೇವೆಗೌಡ ಹಾಗೂ ಬಿಜೆಪಿ ರಾಷ್ಟ್ರೀಯ ನಾಯಕರ ಮಧ್ಯೆ ಮಾತುಕತೆ ನಡೆದಿದೆ. ಮೈತ್ರಿ ಬಗ್ಗೆ ನಮಗೆ ಮಾತನಾಡಲು ಅಧಿಕಾರ ಇಲ್ಲ. ಪ್ರೀತಂ ಗೌಡ ಸಹ ಈ ಬಗ್ಗೆ ಬಹಿರಂಗ ಹೇಳಿಕೆ ನೀಡಬಾರದು. ಏನೆ ಸಮಸ್ಯೆ ಇದ್ದರೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜೊತೆಗೆ ಮಾತನಾಡಬೇಕು ಎಂದು ಹೇಳಿದರು.

    ಬೆಳಗಾವಿ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಇನ್ನೂ ಅಂತಿಮಗೊಂಡಿಲ್ಲ. ಹಾಗಾಗಿ, ಜಗದೀಶ ಶೆಟ್ಟರ್ ಹೇಗೆ ಅತಂತ್ರರಾಗುತ್ತಾರೆ ? ಎಂದು ಪ್ರಶ್ನಿಸಿದ ಜೋಶಿ, ಕೆಲವು ಬಾರಿ ಪರ- ವಿರೋಧ ವ್ಯಕ್ತವಾಗುವುದು ಸಹಜ. ಅದನ್ನು ಪಕ್ಷದ ಪ್ರಮುಖರು ಸರಿಪಡಿಸುತ್ತಾರೆ. ಬೆಳಗಾವಿ ಕ್ಷೇತ್ರದಲ್ಲಿ ಶೆಟ್ಟರ್ ಹೆಸರು ಮುಂಚೂಣಿಯಲ್ಲಿ ಇದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts