ಸಿಎಂ ಆದ ಖುಷಿಗೆ RADO ವಾಚ್ ಗಿಫ್ಟ್ ಮಾಡಿದ ಸಿದ್ದರಾಮಯ್ಯ ಪತ್ನಿ!

Rado Watch
Published on

ಬೆಂಗಳೂರು: ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಸಿದ್ದರಾಮಯ್ಯ ಅವರಿಗೆ ಪತ್ನಿ ಉಡುಗೊರೆಯಾಗಿ ವಾಚ್​ ನೀಡಿದ್ದಾರೆ. ಧರ್ಮಪತ್ನಿ ಪಾರ್ವತಿ ಅವರು ಉಡುಗೊರೆ ನೀಡಿರುವ RADO ವಾಚ್ ಧರಿಸಿಕೊಂಡು ಸಿದ್ದರಾಮಯ್ಯ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಕೆಪಿಸಿಸಿ ಕಚೇರಿಯಲ್ಲಿರುವ ಇಂಧಿರಾಗಾಂಧಿ ಸಂಭಾಗಣದಲ್ಲಿ ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಅವರ ಪುಣ್ಯ ತಿಥಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹೊಸ ವಾಚ್ ಕಟ್ಟಿಕೊಂಡು ಬಂದಿದ್ದರು. ಆಕರ್ಷಕವಾಗಿ ಕಾಣಿಸುತ್ತಿದ್ದ ವಾಚ್​ ಅನ್ನು ಡಿಕೆಶಿ ನೋಡಿದ್ದಾರೆ. ಈ ವೇಳೆ ಸಿಎಂ ಆದ ಕಾರಣಕ್ಕೆ ಪತ್ನಿ ವಾಚ್ ಗಿಫ್ಟ್ ಮಾಡಿರುವುದಾಗಿ ಡಿಕೆಶಿ ಹಾಗೂ ಎಂ.ಬಿ. ಪಾಟೀಲ್ ಅವರಲ್ಲಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ಬಿಜೆಪಿ ಇರುವವರೆಗೆ ಶಾಂತಿ, ನೆಮ್ಮದಿ ಇರಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬ್ರಿಟಿಷರನ್ನು ಓಡಿಸಿ ಸ್ವತಂತ್ರ ಕೊಡಿಸಿದ್ದು, ಕಾಂಗ್ರೆಸ್ ಪಕ್ಷವಾಗಿದೆ. ಸ್ವತಂತ್ರ ಬೆಲೆ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಕಾಂಗ್ರೆಸ್ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯಸ್ಮರಣೆಯ ಅಂಗವಾಗಿ ಇಂದಿರಾ ಗಾಂಧಿ ಭವನದಲ್ಲಿ ಪುಣ್ಯಸ್ಮರಣೆ ಕಾರ್ಯಕ್ರಮ ಹಂಬಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಅವರು, ರಾಜೀವ್ ಗಾಂಧಿ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡೋಣ. ಮೋದಿ ಭಯೋತ್ಪಾದನೆ ತೊಲಗಬೇಕು ಎಂದು ಹೇಳುತ್ತಾರೆ. ಮೊದಲೇ ಕಾಂಗ್ರೆಸ್ ಈ ವಿಚಾರವಾಗಿ ಹೋರಾಟ ಮಾಡಿತ್ತು. ಭಯೋತ್ಪಾದನೆಗೆ, ಖಲಿಸ್ತಾನ ಉಗ್ರರಿಗೆ ಇಂದಿರಾ ಗಾಂಧಿ ಬಲಿಯಾಗಿದ್ದಾರೆ ಎಂದಿದ್ದಾರೆ.

ಬಿಜೆಪಿ ವಿರುದ್ಧ ಸಿದ್ಧು ವಾಗ್ದಾಳಿ

ಬ್ರಿಟಿಷ್ ಓಡಿಸಿ ಸ್ವತಂತ್ರ ಕೊಡಿಸಿದ್ದು, ಕಾಂಗ್ರೆಸ್ ಪಕ್ಷವಾಗಿದೆ. ಸ್ವತಂತ್ರ ಬೆಲೆ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಕಾಂಗ್ರೆಸ್ ಕಾರಣ. ನೆಹರು ಪ್ರಜಾಪ್ರಭುತ್ವ ಬುನಾದಿ ಹಾಕಿದ್ದಾರೆ. ಆದರೆ ನರೇಂದ್ರ ಮೋದಿ ಅಂತಹ ನಾಟಕಾರ ಎಲ್ಲಿ ಸಿಗಲ್ಲ. ಮಾತಿಗೆ ಮಾತ್ರ ಸಭ್ ಕಾ ಸಥ್ ಎನ್ನುತ್ತಾರೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು‌ ಹೋಗಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿಯವರು ಯಾರು ಕೂಡ ಸ್ವತಂತ್ರ ಹೋರಾಟದಲ್ಲಿ ಸತ್ತಿಲ್ಲ. ಎಲ್ಲಿಯವರೆಗೆ ಬಿಜೆಪಿ ಇರುವವರೆಗೆ ಶಾಂತಿ,ನೆಮ್ಮದಿ ಇರಲ್ಲ. ಜಾತಿ, ಧರ್ಮದ ಹೆಸರಲ್ಲಿ ಸಮಾಜ ಒಡೆಯುತ್ತಿದ್ದಾರೆ ಇಡಿ ದೇಶದಲ್ಲಿ ಶಾಂತಿ ನೆಲಸಬೇಕು ಎಂದು ಬಿಜಿಪಿ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net