More

    ಸಿದ್ದರಾಮಯ್ಯ ಸಿಎಂ ಆಗಲು ಬಹುಮತ ಬೇಕಲ್ಲವೇ? ಕೆ.ಎಸ್.ಈಶ್ವರಪ್ಪ ಪ್ರಶ್ನೆ

    ಶಿವಮೊಗ್ಗ: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ನಮ್ಮದೇನೂ ಅಭ್ಯಂತರವಿಲ್ಲ. ಆದರೆ ಜನ ಕಾಂಗ್ರೆಸ್‌ಗೆ ಬಹುಮತ ನೀಡಬೇಕು. ಸಿದ್ದರಾಮಯ್ಯ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕಲ್ಲವೇ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.
    ಸಿಎಂ ಆಗಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತರು. ಸರ್ಕಾರವನ್ನೇ ಕಳೆದುಕೊಂಡರು. ಎಲ್ಲ ಚುನಾವಣೆಗಳಲ್ಲೂ ಸತತವಾಗಿ ಕಾಂಗ್ರೆಸ್ ಸೋಲು ಕಂಡಿದೆ. ಲೋಕಸಭೆಯಲ್ಲಿ ಅಧಿಕೃತ ಪ್ರತಿಪಕ್ಷ ಸ್ಥಾನವೂ ಇಲ್ಲದಂತಾಗಿದೆ. ಈಗ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಸಿಎಂ ಸ್ಥಾನದ ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
    ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುವುದೆಂದು ತೀರ್ಮಾನಿಸಲಿ. ಅಲ್ಲಿ ಜನ ನಿಮ್ಮನ್ನು ಗುರುತಿಸಿ ಆಯ್ಕೆ ಮಾಡಲಿ. ಅವರಿಬ್ಬರಿಗೂ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ. ನನ್ನನ್ನು ಸಿಎಂ ಮಾಡಲು ಸಹಕಾರ ನೀಡಿ ಎಂದು ಡಿ.ಕೆ.ಶಿವಕುಮಾರ್ ಒಕ್ಕಲಿಗರ ಸಭೆಯಲ್ಲಿ ಅವಕಾಶ ಕೇಳುವ ಮೂಲಕ ತಾನು ಜಾತಿವಾದಿ ಎಂಬುದನ್ನು ಸಾಭೀತುಪಡಿಸಿದ್ದಾರೆ ಎಂದು ದೂರಿದರು.
    ಚುನಾವಣೆ ಬರಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರಿಗೂ ಮಣ್ಣು ಮುಕ್ಕಿಸುತ್ತೇವೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡುವುದಿಲ್ಲ. 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ ಎಂದು ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts