More

    ನೀವು ಕಾಂಗ್ರೆಸ್​ ಬಿಡೋದು ಯಾವಾಗ? ನಾನು ಕಾತರದಿಂದ ಕಾಯುತ್ತಿರುವೆ… ಎಂದ ಎಚ್​ಡಿಕೆ

    ಬೆಂಗಳೂರು: ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಎಚ್​.ಡಿ.ಕುಮಾರಸ್ವಾಮಿ ನಡುವಿನ ಮಾತಿನ ಸಮರ ತಾರಕಕ್ಕೇರಿದೆ.

    ‘ನಾನು ಇಷ್ಟೊಂದು ಕೆಟ್ಟದ್ದಾಗಿ ಸೋಲ್ತೀನಿ ಅಂತ ಭಾವಿಸಿರಲಿಲ್ಲ. ನನ್ನ ಸೋಲಿಗೆ ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದರು. ಜತೆಗೆ ನಮ್ಮ ಪಕ್ಷದ ಕೆಲವರಿಗೆ ನಾನು ಸಿಎಂ ಆಗುವುದು ಬೇಕಿರಲಿಲ್ಲ. ಹಾಗಾಗಿ ನಾನು ಸೋತೆ. ಪಕ್ಷ ವಿರೋಧಿಗಳು ಆತ್ಮಾವಲೋಕನ ಮಾಡಿಕೊಂಡು ಅವರಾಗಿಯೇ ಕಾಂಗ್ರೆಸ್​ನಿಂದ ಹೊರ ಹೋಗಬೇಕು ಎಂದು ನಿನ್ನೆ(ಶುಕ್ರವಾರ) ಮೈಸೂರಿನಲ್ಲಿ ಸಿದ್ದರಾಮಯ್ಯ ಕಾರ್ಯಕರ್ತರ ಎಂದರು ಅಸಮಾಧಾನ ಹೊರಹಾಕಿದ್ದರು. ಇದರ ಬೆನ್ನಲ್ಲೇ ಟ್ವೀಟ್​ ಮೂಲಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಎಚ್​ಡಿಕೆ, ಕೊರಟಗೆರೆ ಯಲ್ಲಿ ಯಾರ ಜತೆ ಒಳ ಒಪ್ಪಂದ ಮಾಡಿಕೊಂಡು ಡಾ. ಜಿ.ಪರಮೇಶ್ವರ್ ಅವರನ್ನ ಸೋಲಿಸಿದ್ರಿ ಅನ್ನೋದರ ಬಗ್ಗೆ ಮೊದಲು ಆತ್ಮಾವಲೋಕನ ಮಾಡಿಕೊಳ್ಳಿ ಎಂದಿದ್ದಾರೆ. ಇದನ್ನೂ ಓದಿರಿ ನಾನು 110 ಕೆಜಿ ಇದ್ದೇನೆ, ಕಾಂಗ್ರೆಸ್​ಗೆ ನನ್ನನ್ನು ತುಳಿಯೋಕೆ ಆಗಲ್ಲ ಎನ್ನುತ್ತಲೇ ಜೆಡಿಎಸ್​ಗೆ ಇಬ್ರಾಹಿಂ ಎಂಟ್ರಿ!

    ‘ನನ್ನನ್ನು ಸೋಲಿಸಿದವರು, ಆತ್ಮವಿಮರ್ಶೆ ಮಾಡಿಕೊಂಡು ತಾವೇ ಪಕ್ಷಬಿಟ್ಟು ಹೋಗಬೇಕು’ ಎಂದು ನೀವು ಹೇಳಿದ್ದೀರಿ. 2009-10ರ ಉಪಚುನಾವಣೆ, 2013ರ ಚುನಾವಣೆಗಳಲ್ಲಿ ಒಳ ಒಪ್ಪಂದ ಮಾಡಿಕೊಂಡ ನಿಮ್ಮ ಆತ್ಮವಿಮರ್ಶೆ ಯಾವಾಗ? ಕಾಂಗ್ರೆಸ್‌ ಬಿಡುವುದು ಯಾವಾಗ? ಈಗಾಗಲೇ ಒಂದು ಬಾರಿ ತಾಯಿಯಂಥ ಪಕ್ಷಕ್ಕೆ ದ್ರೋಹ ಮಾಡಿದ ನಿಮ್ಮ ಉತ್ತರ ಕೇಳಲು ಕಾತುರನಾಗಿದ್ದೇನೆ ಎಂದು ಸಿದ್ದರಾಮಯ್ಯಗೆ ಎಚ್​ಡಿಕೆ ತಿರುಗೇಟು ನೀಡಿದ್ದಾರೆ.

    ಸಿದ್ದರಾಮಯ್ಯರ ಉಡಾಫೆ ಮಾತುಗಳಿಗೆ ಪ್ರತಿಕ್ರಿಯಿಸದಿರಲು ಇಚ್ಚಿಸಿದ್ದೆ. ಆದರೆ, ಚಾಮುಂಡೇಶ್ವರಿಯಲ್ಲಿನ ಭಾಷಣದಿಂದ ಹೊಮ್ಮಿರುವ ಅವರ ದ್ವಂದ್ವ ನಿಲುವಿನ ಬಗ್ಗೆ ಮಾತಾಡಬೇಕಿದೆ. ಅಲ್ಲಿ ಅವರು ಏನಾದರೂ ಹೇಳಿರಲಿ. ಅದರೆ, ಒಳಒಪ್ಪಂದದ ಆರೋಪ, ಕುಮಾರಸ್ವಾಮಿಯನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂಬ ದ್ವಂದ್ವದ ಬಗ್ಗೆ ಮಾತಾಡುವೆ ಎಂದಿರುವ ಕುಮಾರಸ್ವಾಮಿ, ‘ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌-ಬಿಜೆಪಿ ಒಳಒಪ್ಪಂದ ಮಾಡಿಕೊಂಡವು. ಅದರಲ್ಲಿ ಕಾಂಗ್ರೆಸ್ಸಿಗರೂ ಸೇರಿದರು. ಬಾದಾಮಿಯಲ್ಲಿ ನಾನು ಗೆಲ್ಲದಿದ್ದರೆ ಭವಿಷ್ಯ ಕತ್ತಲಾಗುತ್ತಿತ್ತು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗೆ ಒಪ್ಪಂದವಾಗಿದ್ದರೆ, ಅದು ಬಾದಾಮಿಗೂ ಅನ್ವಯಿಸುತ್ತಿರಲಿಲ್ಲವೇ? ಬಾದಾಮಿಯಲ್ಲಿ ಅವರನ್ನು ಗೆಲ್ಲಲು ಬಿಡುತ್ತಿದ್ದವಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿರಿ ಸೆಕ್ಸ್​ ಮಾಡುವಾಗ ಪ್ರಜ್ಞೆ ತಪ್ಪಿದಳು, ನಾನು ಕೊಲೆ ಮಾಡಿಲ್ಲ… ಎಂದು ಕಣ್ಣೀರಿಟ್ಟ ಆರೋಪಿ

    ‘2018ರಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್​ ಮೈತ್ರಿಯಾಗಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ಹೈಕಮಾಂಡ್‌ನ ನಿರ್ಧಾರವಾಗಿತ್ತು’ ಎಂದು ಸಿದ್ದರಾಮಯ್ಯ ಹಲವು ಬಾರಿ ಹೇಳಿದ್ದಾರೆ. ಆದರೆ, ‘ಚಾಮುಂಡೇಶ್ವರಿಯಲ್ಲಿ ಭಾಷಣದ ವೇಳೆ, ‘ನಾನು ಒಪ್ಪದಿದ್ದರೆ ಕುಮಾರಸ್ವಾಮಿ ಸಿಎಂ ಆಗುತ್ತಿರಲಿಲ್ಲ’ ಎಂದಿದ್ದಾರೆ. ಇಲ್ಲಿ ದ್ವಂದ್ವ ಇಲ್ಲವೇ? ಎಂದು ಎಚ್​ಡಿಕೆ ಮರು ಪ್ರಶ್ನೆ ಹಾಕಿದ್ದಾರೆ.

    2009-2010ರ 20 ಉಪಚುನಾವಣೆಗಳನ್ನು ಸಿದ್ದರಾಮಯ್ಯ ಒಮ್ಮೆ ಪರಾಮರ್ಶೆ ಮಾಡಲಿ. ಆ ಹೊತ್ತಿನಲ್ಲಿ ತಮ್ಮನ್ನು ಕಾಂಗ್ರೆಸ್‌ ಕಡೆಗಣಿಸಿತ್ತು ಎಂಬ ಕಾರಣಕ್ಕೆ ಅವರು ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಅವರ ಆತ್ಮ ನೆನಪಿಸುತ್ತದೆ. ಅದರ ಪರಿಣಾಮವಾಗಿ ಕಾಂಗ್ರೆಸ್‌ ಎಷ್ಟು ಸ್ಥಾನ ಗೆದ್ದಿತ್ತು ಎಂಬುದನ್ನೂ ಮನದಟ್ಟು ಮಾಡಿಸುತ್ತದೆ. 2013ರ ಚುನಾವಣೆಯತ್ತ ಅವರು ಒಮ್ಮೆ ನೋಡಲಿ. ಆಗ ಅವರು ಯಾರನ್ನೆಲ್ಲ ಸೋಲಿಸಿದ್ದರು, ಕೊರಟಗೆರೆಯಲ್ಲಿ ಯಾರೊಂದಿಗೆ ಒಳಒಪ್ಪಂದ ಮಾಡಿಕೊಂಡು, ಯಾರ ಭವಿಷ್ಯವನ್ನು ಕತ್ತಲಲ್ಲಿಟ್ಟಿದ್ದರು ಎಂಬುದನ್ನು ಮನನ ಮಾಡಿಕೊಳ್ಳಲಿ. 2013ರ ಚುನಾವಣೆಯನ್ನು ಪರಾಮರ್ಶಿಸಿದರೆ, ಪಕ್ಷದ್ರೋಹದ ಆಧಾರದ ಮೇಲೆ ಅವರು ಕಾಂಗ್ರೆಸ್‌ ಬಿಡಬೇಕು! ಇದು ಅವರ ದ್ವಂದ್ವ ಎಂದು ಮಾತಿನಲ್ಲೇ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿವಿದಿದ್ದಾರೆ.

    ಅಲ್ಲದೆ, ನೀವೊಂದು ಪ್ರಾದೇಶಿಕ ಪಕ್ಷ ಕಟ್ಟಿ ಹತ್ತು ಸ್ಥಾನ ಗೆದ್ದು ತೋರಿ ಎಂದೂ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

    ನಾನು ಇಷ್ಟೊಂದು ಕೆಟ್ಟದ್ದಾಗಿ ಸೋಲ್ತೀನಿ ಅಂತ ಭಾವಿಸಿರಲಿಲ್ಲ… ಎನ್ನುತ್ತಲೇ ಭಾವುಕರಾದ ಸಿದ್ದು

    ಬೈಕ್​ನಲ್ಲಿ ಕುಳಿತು ನಿದ್ರೆಗೆ ಜಾರಿದ ತಾಯಿ-ಮಕ್ಕಳು ತರಗೆಲೆಯಂತೆ ರಸ್ತೆಗೆ ಉರುಳಿದರು! ಬೆಚ್ಚಿಬೀಳಿಸುತ್ತೆ ಈ ದೃಶ್ಯ

    ನಾನು ತುಂಬಾ ತಪ್ಪು ಮಾಡುತ್ತಿರುವೆ, ನೀವೆಲ್ಲರೂ ಬಂದು ನನ್ನ ಶವದ ಮೇಲೆ ಮಣ್ಣು ಹಾಕಿ… ಇದೇ ನನ್ನ ಕೋರಿಕೆ

    ಪತ್ನಿ ಊರಿಗೆ ಹೋದಳೆಂದು ಸ್ನೇಹಿತೆಯನ್ನ ಮನೆಗೆ ಕರೆಸಿಕೊಂಡ ಟೆಕ್ಕಿಗೆ ಕಾದಿತ್ತು ಶಾಕ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts