More

    ಸಿದ್ಧೇಶ್ವರ ಸ್ವಾಮೀಜಿಯವರ ಗುರು ನಮೋತ್ಸವ ಜ. 19ರಂದು

    ರಾಣೆಬೆನ್ನೂರ: ವೇದ, ಉಪನಿಷತ್‌ನ್ನು ಸಾಮಾನ್ಯ ಭಾಷೆಯಲ್ಲಿ ಜನರಿಗೆ ತಲುಪಿಸಿದ ಸಂತ ವಿಜಯಪುರದ ಲಿಂ. ಸಿದ್ಧೇಶ್ವರ ಸ್ವಾಮೀಜಿಯವರ ಸವಿನೆನಪಿಗಾಗಿ ರಾಣೆಬೆನ್ನೂರ ಶಹರ ಪೊಲೀಸ್ ಠಾಣೆ, ಅಕ್ಕಿಆಲೂರಿನ ಸ್ನೇಹ ಮೈತ್ರಿ ಬ್ಲಡ್ ಆರ್ಮಿ ವತಿಯಿಂದ ಜ. 19ರಂದು ಸಂಜೆ 5.30ಕ್ಕೆ ನಗರದ ಮುನ್ಸಿಪಲ್ ಮೈದಾನದಲ್ಲಿ ಶ್ರೀ ಗುರು ನಮನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸ್ಥಳೀಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಪ್ರಕಾಶನಂದಜಿ ಮಹಾರಾಜ್ ತಿಳಿಸಿದರು.
    ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಗದಗ ಹಾಗೂ ವಿಜಯಪುರದ ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ, ವಿಜಯಪುರದ ಶ್ರೀ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಹುಲ್ಲಾಳ ಗುರುದೇವಾಶ್ರಮದ ಹರ್ಷಾನಂದ ಸ್ವಾಮೀಜಿ, ರಾಣೆಬೆನ್ನೂರ ವಿವೇಕಾನಂದ ಆಶ್ರಮದ ಪ್ರಕಾಶಾನಂದ ಸ್ವಾಮೀಜಿ ಪ್ರವಚನ ನೀಡಲಿದ್ದಾರೆ.
    ಶಾಸಕ ಪ್ರಕಾಶ ಕೋಳಿವಾಡ ಅತಿಥಿಯಾಗಿ ಪಾಲ್ಗೊಳ್ಳುವರು. ಅಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿದ್ದು, ಎಲ್ಲರಿಗೂ ಆಸನದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
    ಪ್ರಮುಖರಾದ ಪ್ರಕಾಶ ಬುರಡಿಕಟ್ಟಿ, ಶೇಖಪ್ಪ ಹೊಸಗೌಡ್ರ, ಶೇರುಖಾನ ಕಾಬೂಲಿ, ಎ.ಎಂ. ನಾಯಕ, ಏಕನಾಥ ಭಾನುವಳ್ಳಿ, ರವೀಂದ್ರಗೌಡ ಪಾಟೀಲ, ಅಜಯ ಮಠದ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts