More

    ಶ್ರೀಗಳ ದರ್ಶನಕ್ಕೆ ಜನದಟ್ಟಣೆ; ಬ್ಯಾರಿಕೇಡ್ ಸರಿಸಿ ಭಕ್ತರಿಗೆ ಅನುಕೂಲ ಕಲ್ಪಿಸಿದ ಶ್ರೀರಾಮುಲು

    ವಿಜಯಪುರ: ಸೈನಿಕ ಶಾಲೆಯಲ್ಲಿ ಶ್ರೀಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಭಕ್ತರು ಆಗಮಿಸಿ ಶ್ರೀಗಳ ದರ್ಶನ ಪಡೆಯುತ್ತಿದ್ದಾರೆ. ಸೈನಿಕ ಶಾಲೆಯ ಆವರಣದಲ್ಲಿ ಬೃಹತ್‌ ವೇದಿಕೆ ಹಾಕಲಾಗಿದ್ದು, ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಶ್ರೀಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದರ್ಶನಕ್ಕೆ ಬರುತ್ತಿರುವ ಭಕ್ತರಿಗೆ ಮುಖ್ಯದ್ವಾರದ ಮೂಲಕ ಆಗಮಿಸಿ ಎರಡನೆ ಗೇಟ್‌ನಲ್ಲಿ ನಿರ್ಗಮನಕ್ಕೆ ಅವಕಾಶ ಮಾಡಿಕೊಡಲಾಗಿದೆ.

    ಪೂಜ್ಯ ಸಿದ್ದೇಶ್ವರ ಶ್ರೀಗಳ ದರ್ಶನಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವೇದಿಕೆ ಮುಂಭಾಗದಲ್ಲಿ ತೀವ್ರ ಜನದಟ್ಟಣೆ ಉಂಟಾಯಿತು‌. ಈ ಮಧ್ಯೆ ಮಾಧ್ಯಮದವರು ವೇದಿಕೆ ಮುಂಭಾಗದ ಜಾಗ ಅತಿಕ್ರಮಿಸಿಕೊಂಡಿದ್ದರಿಂದ ಪೂಜ್ಯರ ಮುಖದರ್ಶನಕ್ಕಾಗಿ ಭಕ್ತರು ತಡಕಾಡಿದರು. ಇದನ್ನು ಮನಗಂಡ ಸಚಿವ ಶ್ರೀರಾಮುಲು ಕೂಡಲೇ ಮಾಧ್ಯಮದವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಆ ಜಾಗದ ಸುತ್ತ ಇದ್ದ ಬ್ಯಾರಿಕೇಡ್ ತೆರವುಗೊಳಿಸಿ, ತಾಡಪಲ್ ತೆಗೆದು ಸುಗಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು ಭಕ್ತರ ಗಮನ ಸೆಳೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts