Saturday, 17th November 2018  

Vijayavani

ಮೈಸೂರು ಪಾಲಿಕೆಯಲ್ಲಿ ದೋಸ್ತಿ ತಂತ್ರ - ಮಾತುಕತೆ ಯಶಸ್ವಿ - 2 ವರ್ಷ ಕಾಂಗ್ರೆಸ್, 3 ವರ್ಷ ಜೆಡಿಎಸ್​​ಗೆ        ಮೀಸಲಾತಿ ವಿಚಾರದಲ್ಲಿ ದೋಸ್ತಿಗಳೇ ಗರಂ - ಸಿಎಂ ಎಚ್​​ಡಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ        ಅನಂತ್ ನಿಧನದಿಂದಾಗಿರೋ ನಷ್ಟ ಭರಿಸಲು ಸರ್ಕಸ್ - ರಾಜ್ಯ ಬಿಜೆಪಿ ಸಂಸದರಿಗೆ ಸಿಗುತ್ತಾ ಸಚಿವ ಭಾಗ್ಯ        ಇಂದು ಮಹದಾಯಿ ಕುರಿತು ಸರ್ವಪಕ್ಷ ಸಭೆ - ಮುಂದಿನ ಕ್ರಮದ ಬಗ್ಗೆ ನಡೆಯಲಿದೆ ಮಹತ್ವದ ಚರ್ಚೆ        ಇಂದು ಶಬರಿಮಲೆ ಬಾಗಿಲು ಮತ್ತೆ ಓಪನ್ - ಮಹಿಳೆಯರಿಗೆ ದರ್ಶನ ಸಿಗುತ್ತೋ? ಸಿಗಲ್ವೋ..?       
Breaking News

ಸಿದ್ಧಗಂಗಾ ಶ್ರೀ ಅನಾರೋಗ್ಯ: ಭಕ್ತರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದ ಕಿರಿಯ ಶ್ರೀ

Friday, 26.01.2018, 1:25 PM       No Comments

ಬೆಂಗಳೂರು: ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿರುವ ಸಿದ್ಧಗಂಗಾ ಶ್ರೀಗಳ ವಿಷಯವಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಕಿರಿಯ ಶ್ರೀ ಬಸವ ರಮಾನಂದ ಮಹಾಸ್ವಾಮೀಜಿ ಹೇಳಿದ್ದಾರೆ.

ಶತಾಯುಷಿ ಡಾ. ಶಿವಕುಮಾರ ಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆಯೇ ಭಕ್ತರಲ್ಲಿ ಆತಂಕ ಮನೆ ಮಾಡಿತ್ತು. ಕೆಲ ಭಕ್ತರು ಆಸ್ಪತ್ರೆಯತ್ತ ಧಾವಿಸಲು ಕೂಡ ಪ್ರಾರಂಭಿಸಿದ್ದರು. ಆದರೆ, ಈಗ ಮಠದ ಕಿರಿಯ ಶ್ರೀ ಬಸವ ರಮಾನಂದ ಮಹಾಸ್ವಾಮೀಜಿ ಹಿರಿಯ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ಶ್ರೀಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಓಪನ್​ ಹಾರ್ಟ್​ ಸರ್ಜರಿ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ.

ಈಗಾಗಲೇ ಶ್ರೀಗಳಿಗೆ 5 ಸ್ಟಂಟ್​​ಗಳನ್ನು ಅಳವಡಿಸಲಾಗಿದೆ. ಅವರ ರಕ್ತದೊತ್ತಡದಲ್ಲಿ ಏರುಪೇರಾಗಿದ್ದು ಕಂಡುಬಂದಿತ್ತು. ರಕ್ತದ ತಪಾಸಣೆ ವರದಿಯಲ್ಲಿ ಇನ್​ಫೆಕ್ಷನ್​ ಪತ್ತೆಯಾಗಿದೆ. ಕಿಡ್ನಿಯಲ್ಲಿ ಸೋಂಕು ಕಂಡು ಬಂದಿದೆ. ಶ್ರೀಗಳಿಗೆ ಉಸಿರಾಟದ ಚಿಕಿತ್ಸೆ ಕೂಡ ನೀಡಲಾಗುತ್ತಿದೆ ಎಂದು ಕಿರಿಯ ಶ್ರೀಗಳು ಹೇಳಿದ್ದಾರೆ.

ಶ್ರೀಗಳಿಗೆ 110 ವರ್ಷ ವಯಸ್ಸಾಗಿರುವುದರಿಂದ ಹೆಚ್ಚಿನ ನಿಗಾ ವಹಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯ ಡಾ. ರವೀಂದ್ರ ಹೇಳಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top