Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ಜೈಲ್ ಭರೋ ಚಳವಳಿಗೆ ಸಹಿ ಸಂಗ್ರಹ

Friday, 13.07.2018, 5:00 AM       No Comments

ಮದ್ದೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.9 ರಂದು ನಡೆಯುವ ಜೈಲ್ ಭರೋ ಚಳವಳಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ರೈತರಿಂದ ಸಹಿ ಸಂಗ್ರಹ ಮಾಡುವ ಕಾರ್ಯಕ್ಕೆ ರೈತ ಸಂಘದ (ಮೂಲ ಸಂಘಟನೆ) ಜಿಲ್ಲಾಧ್ಯಕ್ಷ ಬೋರಾಪುರ ಶಂಕರೇಗೌಡ ಪಟ್ಟಣದಲ್ಲಿ ಚಾಲನೆ ನೀಡಿದರು.

ನಂತರ ಮಾತನಾಡಿ, ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ನಿಗದಿಗೊಳಿಸಿ ಶಾಸನ ಭದ್ರತೆ ಒದಗಿಸುವುದು, ವಯಸ್ಸಾದ ರೈತರಿಗೆ 5,000 ರೂ.ಪಿಂಚಣಿ ಸೇರಿದಂತೆ ಹಲವು ಬೇಡಿಕಗಳ ಈಡೇರಿಕೆಗೆ ಆಗ್ರಹಿಸಿ ಚಳವಳಿ ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ರೈತರಿಂದ ಸಹಿ ಸಂಗ್ರಹಕ್ಕೆ ಮುಂದಾಗಿರುವುದು ಸಂತೋಷದ ಸಂಗತಿ ಎಂದರು.

ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್ ಮಾತನಾಡಿದರು. ತಾಲೂಕಿನಾದ್ಯಂತ ಹತ್ತು ಸಾವಿರ ರೈತರಿಂದ ಸಹಿ ಸಂಗ್ರಹಿಸುವ ಉದ್ದೇಶ ಹೊಂದಲಾಗಿದೆ.

Leave a Reply

Your email address will not be published. Required fields are marked *

Back To Top