ಸಿದ್ದಾಪುರ ಸರ್ಕಾರಿ ಶಾಲೆಯಲ್ಲಿ ಗಮನಾರ್ಹ ಅಭಿವೃದ್ಧಿ

sid
Published on

ಸಿದ್ದಾಪುರ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಮೂಲಸೌಕರ್ಯ ಒದಗಿಸಿದರೆ ಅಭಿವೃದ್ಧಿಯಾಗುವುದು ಎಂಬುದಕ್ಕೆ ಸಿದ್ದಾಪುರದ ಶಾಲೆಯೇ ಸಾಕ್ಷಿ. ಹಳೇ ವಿದ್ಯಾರ್ಥಿಗಳು, ದಾನಿಗಳ ಸಹಕಾರದಲ್ಲಿ ಶಾಲಾ ಕಟ್ಟಡ ನಿರ್ಮಾಣಗೊಂಡಿದ್ದು ಶ್ಲಾಘನಾರ್ಹ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಸಿದ್ದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳು ಹಾಗೂ ದಾನಿಗಳಿಂದ 50 ರೂ. ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡವನ್ನು ಇತ್ತೀಚೆಗೆ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷೆ ಶ್ರೀಲತಾ ಶೆಟ್ಟಿ ಎಲ್‌ಕೆಜಿ, ಯುಕೆಜಿ ತರಗತಿ ಉದ್ಘಾಟಿಸಿ ಶುಭಹಾರೈಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ, ಕಟ್ಟಡ ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಎಸ್.ಸಂಜೀವ ಶೆಟ್ಟಿ, ಅಧ್ಯಕ್ಷ ಶ್ರೀಕಾಂತ ನಾಯಕ್, ಪ್ರಮುಖರಾದ ಗಣೇಶ ಶೇಟ್, ದೇವದಾಸ ಭಟ್, ಸತ್ಯನಾಥ ಆಚಾರ್ಯ, ಪ್ರವೀಣ್ ಪಾಟೇಲ್, ಲಕ್ಷ್ಮೀನಾರಯಣ ಪೈ ಸಿದ್ದಾಪುರ, ಕೃಷ್ಣ ಪೂಜಾರಿ, ಶಂಕರ್, ಪ್ರಸಾದ್ ಶೆಟ್ಟಿ, ಚಂದ್ರ ಕುಲಾಲ, ರೇವತಿ ಶೆಟ್ಟಿ, ಗಾಮ ಪಂಚಾಯಿತಿ ಸದಸ್ಯರು, ಹಳೇ ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರು ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಸೋಮ ನಾಯ್ಕ ಸ್ವಾಗತಿಸಿದರು. ಸತ್ಯನಾಥ ಆಚಾರ್ಯ ವಂದಿಸಿದರು. ಶಿಕ್ಷಕ ಶ್ರೀಧರ್ ಐತಾಳ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net