ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಮುಂದಿನ ಸಿನಿಮಾ ‘ಸಿಕಂದರ್’ ಟೀಸರ್(Sikandar Teaser) ಬಿಡುಗಡೆಯಾಗಿದೆ. ಸಲ್ಮಾನ್ ಖಾನ್ ಆಕ್ಷನ್ ಅವತಾರದಲ್ಲಿ ಮತ್ತೊಮ್ಮೆ ಬಾಕ್ಸ್ ಆಫೀಸ್‌ಗೆ ಮರಳಲು ಸಿದ್ಧರಾಗಿದ್ದಾರೆ. ಚಿತ್ರದ ಟ್ರೇಲರ್ ಅನ್ನು ಆರಂಭದಲ್ಲಿ ಸಲ್ಮಾನ್ ಖಾನ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಡಿಸೆಂಬರ್ 27 ರಂದು ಬೆಳಗ್ಗೆ 11.07ಕ್ಕೆ ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ ಡಿಸೆಂಬರ್ 26ರ ರಾತ್ರಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿಯ ನಂತರ ಅದನ್ನು ಮುಂದೂಡಲಾಯಿತು.

ಇದನ್ನು ಓದಿ: ನಾನು ಕದ್ದುಮುಚ್ಚಿ ದೇವಾಸ್ಥಾನಕ್ಕೆ ಹೋಗುತ್ತಿದ್ದೆ; ಉಳಗನಾಯಕನ್ ಕಮಲ್ ಹಾಸನ್ ಪುತ್ರಿ ಹೀಗೆಳಿದ್ದೇಕೆ? | Shruti Haasan
ಸಲ್ಮಾನ್ ಖಾನ್ ಅವರ ಚಿತ್ರದ ಈ ಸ್ಫೋಟಕ ಟೀಸರ್‌ನಲ್ಲಿ ಬಾಲಿವುಡ್‌ನ ಭಾಯಿಜಾನ್ ಅನಾಗರಿಕ ನೋಟದಲ್ಲಿ ಕಾಣಿಸಿಕೊಂಡಿದ್ದಾರೆ. 2 ನಿಮಿಷಕ್ಕಿಂತ ಕಡಿಮೆ ಅವಧಿಯ ಈ ವಿಡಿಯೋದಲ್ಲಿ ಸಲ್ಮಾನ್ ಖಾನ್ ಬಂದೂಕು ತುಂಬಿದ ಕೊಠಡಿಯಲ್ಲಿ ತಿರುಗಾಡುತ್ತಿರುವುದನ್ನು ಕಾಣಬಹುದು. ಟೀಸರ್‌ನಲ್ಲಿ ಒಂದೇ ಒಂದು ಡೈಲಾಗ್ ಇದ್ದು ಸದ್ಯ ಚರ್ಚೆಗೆ ಗ್ರಾಸವಾಗಿದೆ. ನನ್ನ ಹಿಂದೆ ತುಂಬಾ ಜನ ಇದ್ದಾರೆ, ಇದು ನಾನು ತಿರುಗುವ ಸಮಯ ಎಂದು ಹೇಳುವ ಸಲ್ಲು ಭಾಯಿ ಡೈಲಾಗ್ ಚರ್ಚೆಗೆ ಗ್ರಾಸವಾಗಿದೆ.
ವಾಸ್ತವವಾಗಿ ಈ ಸಂಭಾಷಣೆಯನ್ನು ಬಿಷ್ಣೋಯ್ ಗ್ಯಾಂಗ್‌ಗೆ ಸಲ್ಮಾನ್ ಖಾನ್ ಸಂದೇಶವೆಂದು ಪರಿಗಣಿಸಲಾಗಿದೆ. ಇತ್ತೀಚೆಗಷ್ಟೇ ಬಿಷ್ಣೋಯ್ ಗ್ಯಾಂಗ್ನಿಂದ ಸಲ್ಮಾನ್ ಖಾನ್ಗೆ ಹಲವು ಬಾರಿ ಬೆದರಿಕೆಯೊಡ್ಡಿದ್ದ ಕಾರಣ ಅವರ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.
ಸಿಕಂದರ್ ಚಿತ್ರದ ಟೀಸರ್ಗಾಗಿ ಅಭಿಮಾನಿಗಳು ಬಹಳ ದಿನಗಳಿಂದ ಕಾಯುತ್ತಿದ್ದರು. ಸದ್ಯ ಟೀಸರ್ ನೋಡಿದ ಬಳಿಕ ಸಿನಿಮಾದ ಕುರಿತು ಫ್ಯಾನ್ಸ್ ನಿರೀಕ್ಷೆ ಹೆಚ್ಚಾಗಿದೆ. ಸಾಜಿದ್ ನಾಡಿಯಾಡ್ವಾಲಾ ನಿರ್ಮಾಣದ ಸಿಕಂದರ್ ಚಿತ್ರವನ್ನು ಎಆರ್ ಮುರುಗದಾಸ್ ನಿರ್ದೇಶಿಸುತ್ತಿದ್ದಾರೆ. ಈ ಆಕ್ಷನ್ ಥ್ರಿಲ್ಲರ್‌ನಲ್ಲಿ ಸೌತ್ ಬ್ಯೂಟಿ ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ಸಲ್ಮಾನ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಕಾಜಲ್ ಅಗರ್ವಾಲ್, ಪ್ರತೀಕ್ ಪಾಟೀಲ್ ಬಬ್ಬರ್ ಮತ್ತು ಶರ್ಮನ್ ಜೋಶಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವು ಈದ್ 2025ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.(ಏಜೆನ್ಸೀಸ್)