More

  ರೇಷ್ಮೆ ಮನೆಗೆ ಮಾಡಿದ ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

  ರಾಣೆಬೆನ್ನೂರ: ರೇಷ್ಮೆ ಮನೆ ದುರಸ್ತಿಗಾಗಿ 18.40 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ತಾಲೂಕಿನ ಕರೂರ ಗ್ರಾಮದಲ್ಲಿ ನಡೆದಿದೆ.
  ಸೋಮಪ್ಪ ಕರೆಹನುಮಂತಪ್ಪ ಹೊಸಮನಿ (44) ಮೃತ ರೈತ.
  ಇವರು ರೇಷ್ಮೆ ಮನೆ ದುರಸ್ತಿಗಾಗಿ 18.40 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಸರಿಯಾಗಿ ಮಳೆ ಬಾರದ ಕಾರಣ ಬೇಸಿಗೆಯಿಂದ ರೇಷ್ಮೆ ಬೆಳೆ ಕೂಡ ಬಾರದ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದೆ ಜಮೀನಿನಲ್ಲಿರುವ ರೇಷ್ಮೆ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts