18.5 C
Bangalore
Monday, December 16, 2019

ಮಲ್ಪೆ ಬಂದರಿನಲ್ಲಿ ಹೂಳು ತುಂಬಿ ಬೋಟುಗಳ ಚಲನೆಗೆ ಅಡ್ಡಿ

Latest News

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ಅವಿನ್ ಶೆಟ್ಟಿ, ಉಡುಪಿ
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಭಾರಿ ಪ್ರಮಾಣದಲ್ಲಿ ಹೂಳು ತುಂಬಿಕೊಂಡಿದ್ದು, ಮೀನುಗಾರಿಕಾ ಚಟುವಟಿಕೆಗೆ ಅಡಚಣೆ ಉಂಟಾಗುತ್ತಿದೆ ಎಂದು ಮೀನುಗಾರರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಬಂದರಿನಲ್ಲಿ ಹೂಳು ಸಮಸ್ಯೆ ಗಂಭೀರವಾಗಿರುವುದು ಮೀನುಗಾರರಿಗೆ ತಲೆನೋವಾಗಿದೆ. ಕಳೆದ ವರ್ಷದಿಂದ ಸಮರ್ಪಕವಾಗಿ ಹೂಳು ತೆಗೆಯದ ಪರಿಣಾಮ, ಕೆಸರು, ಕಸ, ಕಡ್ಡಿಗಳು ತುಂಬಿಕೊಂಡು ಬೋಟುಗಳ ಚಲನವಲಕ್ಕೆ ತೊಂದರೆಯಾಗಿದೆ. ಕಳೆದ ಬಾರಿ ಹೂಳು ತೆಗೆಯುವ ಯಂತ್ರ ತರಿಸಿ ಡ್ರೆಜ್ಜಿಂಗ್ ಮಾಡಿದ್ದರೂ, ಸಂಪೂರ್ಣಗೊಂಡಿಲ್ಲ ಎಂಬುದು ಮೀನುಗಾರರು ಆಕ್ರೋಶ.

ಆಳ ಸಮುದ್ರದ ಟ್ರಾಲ್ ಬೋಟ್, ಪರ್ಸಿನ್ ಬೋಟ್ ಹಾಗೂ ಸಮುದ್ರ ತೀರದಲ್ಲಿ ಟ್ರಾಲ್ ಮಾಡುವ ಬೋಟ್ ಸೇರಿದಂತೆ ಜಿಲ್ಲೆಯ ಮಲ್ಪೆ ಹಾಗೂ ಗಂಗೊಳ್ಳಿ ಬಂದರು ವ್ಯಾಪ್ತಿಯಲ್ಲಿ ಒಟ್ಟು 2 ಸಾವಿರಕ್ಕೂ ಅಧಿಕ ಬೋಟುಗಳು ಮಲ್ಪೆ ಬಂದರು ಕೇಂದ್ರಿಕರಿಸಿ ಮೀನುಗಾರಿಕೆ ನಡೆಸುತ್ತಿವೆ. ಹೂಳು ತುಂಬಿದ ಬಂದರಿನಲ್ಲಿ ಬೋಟು ನಿಲ್ಲಿಸಲು ಜಾಗವಿಲ್ಲ ಎಂಬುದು ಮೀನುಗಾರರ ಅಳಲು.

ನೀರಿಗೆ ಬಿದ್ದರೆ ಏಳಲು ಸಾಧ್ಯವಿಲ್ಲ: ಮಲ್ಪೆ ಬಂದರಿನಲ್ಲಿ ಮೀನುಗಾರರು ಸದಾ ಚಟುವಟಿಕೆಯಿಂದ ಇರುತ್ತಾರೆ. ಬಂದರಿನಲ್ಲಿ ನಿಲ್ಲಿಸುವ ಬೋಟುಗಳಿಂದ ಬೋಟಿಗೆ ದಾಟಿಕೊಂಟು ಬಂದರು ಕಟ್ಟೆಗೆ ಬರಬೇಕಾಗುತ್ತದೆ. ಬಲೆ ಜೋಡಿಸುವಾಗ, ಸಾಮಗ್ರಿ ಸಾಗಿಸುವಾಗ ಆಕಸ್ಮಿಕವಾಗಿ ಮೀನುಗಾರರು ಕಾಲು ಜಾರಿ ಹೂಳು ತುಂಬಿದ ಬಂದರು ನೀರಿಗೆ ಬಿದ್ದರೆ, ಎಂಥ ನುರಿತ ಈಜುಗಾರರಾಗಿದ್ದರೂ ಕೈಕಾಲು, ಆಡದೇ ಅಲ್ಲಿಯೇ ಮುಳುಗಿ ಜೀವ ಬಿಡುವ ಅಪಾಯವಿದೆ.

2, 3ನೇ ಹಂತದ ಬಂದರಿನಲ್ಲಿ ಹೂಳು: ಮಲ್ಪೆ ಮೀನುಗಾರಿಕೆ ಬಂದರಿನ 2 ಮತ್ತು 3ನೇ ಹಂತದ ಬಂದರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೂಳು ತುಂಬಿಕೊಂಡಿದೆ. 2ನೇ ಹಂತದ ಬಂದರಿನಲ್ಲಿ ಮೀನುಗಾರಿಕೆ ಮುಗಿಸಿ ಬಂದ ಬೋಟುಗಳು ಅನ್ಲೋಡ್ ಮಾಡಿ, 3ನೇ ಹಂತಕ್ಕೆ ಲಂಗರು ಹಾಕಲು ಸಾಗಬೇಕು. 2 ಮತ್ತು 3 ನೇ ಹಂತದ ನಡುವೆ ಸಾಕಷ್ಟು ಹೂಳು ತುಂಬಿಕೊಂಡಿವೆ. ಇದರಿಂದ ಬೋಟುಗಳ ಚಲನವಲನಕ್ಕೆ ಸಮಸ್ಯೆಯಾಗುತ್ತಿದೆ. ಬೋಟು ಡ್ಯಾಮೇಜ್ ಆಗುವ ಸಾಧ್ಯತೆ ಇರುತ್ತದೆ ಎಂದು ಮೀನುಗಾರರು ಆತಂಕ ವ್ಯಕ್ತಪಡಿಸುತ್ತಾರೆ.

ಹೂಳೆತ್ತಲು 2.25 ಕೋಟಿ ಟೆಂಡರ್: ಮಲ್ಪೆ ಬಂದರಿನಲ್ಲಿ ಹೂಳು ತೆಗೆಯುವ ಬಗ್ಗೆ ಮುಂಬೈ ಸಂಸ್ಥೆಯೊಂದಕ್ಕೆ 2.25 ಕೋಟಿ ರೂ. ಟೆಂಡರ್ ನೀಡಲಾಗಿತ್ತು ಎಂದು ಬಂದರು ಇಲಾಖೆ ಅಧಿಕಾರಿಗಳು ಈ ಹಿಂದೆ ತಿಳಿಸಿದ್ದರು. ಮಲ್ಪೆ ಬಂದರಿನಲ್ಲಿ 90 ಸಾವಿರ ಕ್ಯುಬಿಕ್ ಮೀಟರ್ ಡ್ರಜ್ಜಿಂಗ್ ಗುರಿ ಹೊಂದಲಾಗಿದ್ದು, 2016 ರಲ್ಲಿ 59 ಲಕ್ಷ ರೂ.ವೆಚ್ಚದಲ್ಲಿ ಶೇ.30 ರಷ್ಟು 28 ಸಾವಿರ ಕ್ಯುಬಿಕ್ ಮೀಟರ್ ಡ್ರಜ್ಜಿಂಗ್ ಮಾಡಲಾಗಿತ್ತು. ಬಳಿಕ ಮುಂದಿನ ಹಂತದಲ್ಲಿ ಎಷ್ಟು ಪ್ರಮಾಣದಲ್ಲಿ ಡ್ರಜ್ಜಿಂಗ್ ನಡೆಸಲಾಗಿದೆ ಎಂಬ ಮಾಹಿತಿ ಲಭಿಸಿಲ್ಲ.

ಮಲ್ಪೆ 2 ಮತ್ತು 3ನೇ ಹಂತದ ಬಂದರಿನಲ್ಲಿ ಭಾರಿ ಪ್ರಮಾಣದಲ್ಲಿ ಹೂಳು ತುಂಬಿಕೊಂಡಿದೆ. ಬೋಟುಗಳು ಲಂಗರು ಹಾಕಲು, ಅಚೀಚೆ ಓಡಾಡಲು ಸಮಸ್ಯೆಯಾಗುತ್ತಿದೆ. ಸ್ಪಲ್ವ ಪ್ರಮಾಣದ ಹೂಳನ್ನು ತೆಗೆದಾಗಿದೆ. ಹಂತ, ಹಂತವಾಗಿ ಪೂರ್ಣಪ್ರಮಾಣದಲ್ಲಿ ತೆಗೆಯ ಬೇಕು.
|ಗೊಪಾಲ ಕುಂದರ್, ಮಲ್ಪೆ ಮೀನುಗಾರ ಸಂಘದ ಮುಖಂಡರು

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...