More

  ಜ.7ರಂದು ಮೈಸೂರಿನ ವಾಸವಿ ಮಹಿಳಾ ಸಮಾಜದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

  ಮೈಸೂರು: ಸಿದ್ಧಾರ್ಥನಗರದ ವಾಸವಿ ಮಹಿಳಾ ಸಮಾಜದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಜ.7ರಂದು ಆಯೋಜಿಸಲಾಗಿದೆ ಎಂದು ಅಧ್ಯಕ್ಷೆ ಲಕ್ಷ್ಮೀ ದಿನೇಶ್ ತಿಳಿಸಿದರು.
  ನಗರದ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಅಂದು ಸಂಜೆ 4ಕ್ಕೆ ಕಾರ್ಯಕ್ರಮವನ್ನು ಕನ್ಯಕಾ ಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಎಸ್.ಕೆ.ದಿನೇಶ್ ಉದ್ಘಾಟಿಸುವರು. ನಟಿ ತಾರಾ ಅನುರಾಧಾ ಅತಿಥಿಯಾಗಿ ಆಗಮಿಸಲಿದ್ದಾರೆ. ಶ್ರೀ ಕನ್ಯಕಾಪರಮೇಶ್ವರಿ ಕೋ-ಅಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಚ್.ಎಂ.ಸಂದೀಪ್ ಬಹುಮಾನ ವಿತರಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  ಸಮಾರಂಭದಲ್ಲಿ ಅರ್ಹರಿಗೆ ಕೃತಕ ಕಾಲು ವಿತರಿಸಲಾಗುವುದು. ಸಮಾಜ ಸ್ವಯಂ ಉದ್ಯೋಗಕ್ಕೆ ಒತ್ತು ನೀಡಿ, ಈ ನಿಟ್ಟಿನಲ್ಲಿ ತರಬೇತಿ ನೀಡುತ್ತಿದೆ. ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಶುಲ್ಕ, ಆರ್ಥಿಕವಾಗಿ ಸಮಸ್ಯೆಯಲ್ಲಿರುವವರಿಗೆ ನೆರವು ಮೊದಲಾದ ಸಮಾಜಮುಖಿ ಕೆಲಸದಲ್ಲಿ ತೊಡಗಿದೆ ಎಂದರು
  ಸಮಾಜದ ಕಾರ್ಯದರ್ಶಿ ರಾಧಾಗೋಪಿನಾಥ್, ಖಜಾಂಚಿ ಸಿ.ಎಸ್.ಅನಿತಾ, ಪದಾಧಿಕಾರಿಗಳಾದ ಧನಲಕ್ಷ್ಮೀ, ಡಾ.ಶೋಭಾ, ಸಾಧನಾ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts