ನರಸಿಂಗರಾವ್ ಕಾಲೇಜಿನಲ್ಲಿ ಡಿ.5ರಿಂದ 7ರವರೆಗೆ ರಜತಮಹೋತ್ಸವ

invitation
ನರಸಿಂಗ ರಾವ್ ಕಾಲೇಜಿನ ರಜತಮಹೋತ್ಸವ ಕಾರ್ಯಕ್ರಮದ ಆಮಂತ್ರಣ ಬಿಡುಗಡೆಗೊಂಡಿತು.
Published on

ಕಾರ್ಕಳ: ನಾಲ್ಕೂರು ನರಸಿಂಗರಾವ್ ಸ್ಮಾರಕ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ರಜತ ಮಹೋತ್ಸವ ಡಿ.5, 6 ಹಾಗೂ 7ರಂದು ನಡೆಯಲಿದೆ ಎಂದು ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಗುಣಪಾಲ ಕಡಂಬ ಹೇಳಿದರು.

ಕಾರ್ಕಳ ತಾಲೂಕಿನ ಶಿರ್ಲಾಲು ನಾಲ್ಕೂರು ನರಸಿಂಗರಾವ್ ಸ್ಮಾರಕ ಸರ್ಕಾರಿ ಕಾಲೇಜು ಸಭಾಂಗಣದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರೌಢಶಾಲಾ ರಚನಾ ಸಮಿತಿ ಸದಸ್ಯ ಗೋಪಾಲ್ ನಾಯಕ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ರಜತ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶಾಂತಿರಾಜ್ ಜೈನ್, ಕೋಶಾಧಿಕಾರಿ ಸಂದೀಪ್ ಪೂಜಾರಿ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಶೀತಲ್‌ಕುಮಾರ್ ಜೈನ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ನರಸಿಂಹ ನಾಯಕ್ ಸ್ವಾಗತಿಸಿದರು. ಪ್ರಾಂಶುಪಾಲೆ ಬೇಬಿ ಕೆ.ಈಶ್ವರಮಂಗಳ ವಂದಿಸಿದರು. ಉಪನ್ಯಾಸಕ ಸತೀಶ್ ವಡ್ಡರ್ಸೆ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net