ಸುಂಟಿಕೊಪ್ಪ: ಬೆಳ್ಳಿ ಹಬ್ಬದ ಹೊಸ್ತಿಲ್ಲಿರುವ ನಾಕೂರು ಶಿರಂಗಾಲದ ಕಾನ್‌ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ ವತಿಯಿಂದ ಫೆ.22 ಮತ್ತು 23 ರಂದು ಕಾನ್‌ಬೈಲ್ ಶಾಲಾ ಆವರಣದಲ್ಲಿ ಬೆಳ್ಳಿಹಬ್ಬ ಮತ್ತು ಕ್ರೀಡೋತ್ಸವವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್‌ನ ಅಧ್ಯಕ್ಷ ಶಂಕರನಾರಾಯಣ ತಿಳಿಸಿದ್ದಾರೆ.
25ನೇ ವರ್ಷದ ಕ್ರೀಡೋತ್ಸವದ ಅಂಗವಾಗಿ ಫೆ.22 ರಂದು ಕಾನ್‌ಬೈಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಸ್ಥಳೀಯರಿಗೆ ಕ್ರೀಡೋತ್ಸವ ಆಯೋಜಿಸಲಾಗಿದ್ದು, ಸ್ಥಳೀಯ ಪುರುಷರಿಗೆ ಕಬಡ್ಡಿ ಪಂದ್ಯಾವಳಿ, ಮಕ್ಕಳ ಕಬಡ್ಡಿ (ಪ್ರಾಥಮಿಕ ಶಾಲಾ ವಿಭಾಗ ಮತ್ತು ಪ್ರೌಢಶಾಲಾ ವಿಭಾಗ) ಪಂದ್ಯಾವಳಿ, ಸ್ಥಳೀಯ ಪುರುಷ ಮತ್ತು ಮಹಿಳೆಯರಿಗೆ ಹಗ್ಗ ಜಗ್ಗಾಟ, ಹಾಗೂ ಮಕ್ಕಳಿಗೆ ಕಾಳು ಹೆಕ್ಕುವುದು (5 ವರ್ಷಗೊಳಪಟ್ಟು), ಕಪ್ಪೆ ಜಿಗಿತ, ಗೋಣಿಚೀಲ ಜಿಗಿತ (1ರಿಂದ 7ನೇ ತರಗತಿ ಮಕ್ಕಳಿಗೆ ಮಾತ್ರ)ವಿವಿಧ ಗ್ರಾಮೀಣ ಕ್ರೀಡಾಕೂಟಗಳನ್ನು ಸ್ಥಳೀಯ ಪುರುಷರಿಗೆ ಮತ್ತು ಮಹಿಳೆಯರಿಗೆ ಇತರ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ಫೆ.23 ರಂದು ಜಿಲ್ಲಾ ಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾವಳಿ, ಸ್ಥಳೀಯ ಪುರುಷರಿಗೆ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ ಆಕರ್ಷಕ ಟ್ರೋಫಿ 15 ಸಾವಿರ ರೂ. ನಗದು ಬಹುಮಾನ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 10 ಸಾವಿರ ರೂ. ನಗದು ಬಹುಮಾನ, ಸ್ಥಳೀಯ ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾವಳಿ ವಿಜೇತ ತಂಡಕ್ಕೆ 10 ಸಾವಿರ ರೂ. ನಗದು ಪ್ರಥಮ ಬಹುಮಾನ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 5 ಸಾವಿರ ರೂ.ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ನೀಡಲಾಗುವುದು. ಮಕ್ಕಳಿಗೆ ವಿವಿಧ ಗ್ರಾಮೀಣ ಕ್ರೀಡಾಕೂಟ ಹಾಗೂ ಡಾನ್ಸ್ ಮೇಳ ಆಯೋಜಿಸಲಾಗಿದೆ ಎಂದು ಶಂಕರನಾರಾಯಣ ಹೇಳಿದ್ದಾರೆ.
