

ರೋಮ್: ಇಟಲಿ ದೇಶದ ಮಾಜಿ ಪ್ರಧಾನ ಮಂತ್ರಿ, ಉದ್ಯಮಿ ಸಿಲ್ವಿಯೋ ಬೆರ್ಲುಸ್ಕೋನಿ(86) ಸೋಮವಾರ ನಿಧನರಾಗಿದ್ದಾರೆ.
ಬ್ಲಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯ ಸಂಬಂಧಿ ಕಾಯಿಲೆ, ಪ್ರಾಸ್ಟೇಟ್ ಕ್ಯಾನ್ಸರ್ನಿಂದ ಅವರು ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
1936, ಸೆಪ್ಟೆಂಬರ್ 29ರಂದು ಜನಿಸಿದ ಸಿಲ್ವಿಯೋ ಬೆರ್ಲುಸ್ಕೋನಿ ಮೂರು ಬಾರಿ ಇಟಲಿ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ.