ಈ ಬಹುನಿರೀಕ್ಷಿತ ಸಿನಿಮಾದ ಬಿಡುಗಡೆ ದಿನಾಂಕವು ಶೀಘ್ರದಲ್ಲೇ ಘೋಷಣೆಯಾಗಲಿದೆಯಂತೆ. '777 ಚಾರ್ಲಿ' ಸಿನಿಮಾದ ಸೆನ್ಸಾರ್ ಪೂರ್ಣಗೊಂಡಿದ್ದು, ಸಿನಿಮಾ ಯು/ಎ ಪ್ರಮಾಣಪತ್ರ ಗಿಟ್ಟಿಸಿಕೊಂಡಿದೆ. ಈ ಮಾಹಿತಿಯ ಕುರಿತು ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ಕಾರ್ತಿಕ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.
ಹೌದು, ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ರಕ್ಷಿತ್ ಶೆಟ್ಟಿ ಅವರು ತಮ್ಮ ಸಿನಿಮಾದ ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ. ಪರಂವಃ ಸ್ಟುಡಿಯೋಸ್ ಅಡಿಯಲ್ಲಿ '777 ಚಾರ್ಲಿ' ನಿರ್ಮಾಣ ಆಗಿದ್ದು, ಇದು ಒಂದು ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದೆ.