More

    ಸರಳ ವಿವಾಹ ಸಾಮಾಜಿಕ ಜೀವನಕ್ಕೆ ಸಹಕಾರಿ – ಕೊಪ್ಪಳ ಸಂಸದ ಸಂಗಣ್ಣ ಕರಡಿ ಅಭಿಮತ

    ಸಿಂಧನೂರು: ಸಾಮಾಜಿಕ ಜೀವನಕ್ಕೆ ಸಹಕಾರ ನೀಡುವ ಸಾಮೂಹಿಕ ವಿವಾಹ ಆಯೋಜನೆ ಇತರರಿಗೆ ಮಾದರಿಯಾಗಿದೆ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿದರು. ಗೋನ್ವಾರ ಗ್ರಾಮದಲ್ಲಿ 12 ಜ್ಯೋತಿರ್ಲಿಂಗಗಳ ಮತ್ತು 18 ಶಕ್ತಿಪೀಠಗಳ ಪಂಚಭೂತ ಶಿವದೇವಾಲಯಗಳ ಗುಡಿ ಕಟ್ಟಡದ ಶಂಕು ಸ್ಥಾಪನೆ ಹಾಗೂ 39 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಸಾಮೂಹಿಕ ವಿವಾಹದಿಂದ ಬಡವರು ಮತ್ತು ಅಸಹಾಯಕರಿಗೆ ಆರ್ಥಿಕ ಹೊರೆ ತಪ್ಪಿಸಿದಂತಾಗುತ್ತಿದೆ. ಇಂಥ ಕಾರ್ಯವನ್ನು ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿರುವುದು ಸ್ವಾಗತಾರ್ಹ ಕೆಲಸವಾಗಿದೆ. ಧಾರ್ಮಿಕ ಕ್ಷೇತ್ರದಲ್ಲಿ ಎಲ್ಲರ ಆಶೀರ್ವಾದದೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ವಧು-ವರರು ಉತ್ತಮ ಜೀವನ ನಡೆಸಬೇಕು ಎಂದರು. ಮಿತ ಸಂತಾನ ಪಡೆಯುವ ಮೂಲಕ ಮಗುವಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಲ್ಲಯ್ಯತಾತನವರ ಸಮಾಜಮುಖಿ ಕಾರ್ಯ ಇತರರಿಗೆ ಮಾದರಿಯಾಗಿದೆ ಎಂದರು ತಿಳಿಸಿದರು.

    ಕೆಪಿಸಿಸಿ ಕಾರ್ಯದರ್ಶಿ ಕೆ.ಕರಿಯಪ್ಪ ಮಾತನಾಡಿ, ಶ್ರೀ ಮಲ್ಲಯ್ಯ ತಾತನವರು ಪ್ರತಿ ವರ್ಷವೂ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸ್ಥಳವನ್ನು ಧಾರ್ಮಿಕ ಕ್ಷೇತ್ರವಾಗಿಸಿದ್ದಾರೆ. ಈ ಸಾಮೂಹಿಕ ವಿವಾಹಗಳು ಬಡವರಿಗೆ ವರದಾನವಾಗಿವೆ ಎಂದರು.

    ಶಾಸಕ ವೆಂಕಟರಾವ್ ನಾಡಗೌಡ ನೂತನ ದೇವಸ್ಥಾನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಮಲ್ಲಯ್ಯತಾತ ಸಾನ್ನಿಧ್ಯ ವಹಿಸಿದ್ದರು. ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಅಮರೇಗೌಡ ವಿರೂಪಾಪುರ, ದೇವೆಂದ್ರಪ್ಪ ನಾಯಕ, ಆರ್.ತಿಮ್ಮಯ್ಯ ನಾಯಕ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts