More

    ಸಿಮ್ಸ್ ನಿರ್ದೇಶಕರ ವಜಾಕ್ಕೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹ

    ಶಿವಮೊಗ್ಗ: ಸಿಮ್ಸ್(ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ)ನಲ್ಲಿ ನಡೆದಿರುವ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ನಿರ್ದೇಶಕ ಡಾ. ಒ.ಎಸ್.ಸಿದ್ದಪ್ಪ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶುಕ್ರವಾರ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
    ಮಹಾವೀರ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಹೊರ ರಾಜ್ಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಸಹ ಪ್ರಾಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್ ಅವರ ಮೇಲೆ ಕ್ರಮ ಕೈಗೊಳ್ಳುವುದನ್ನು ಬಿಟ್ಟು ವಿದ್ಯಾರ್ಥಿನಿಗೆ ಬೆದರಿಸಿ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡಿದ್ದು ಅಕ್ಷಮ್ಯ ಅಪರಾಧವಾಗಿದೆ. ಹಾಗಾಗಿ ನಿರ್ದೇಶಕರನ್ನು ಮೊದಲು ತನಿಖೆಗೆ ಒಳಪಡಿಸಬೇಕು. ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ನಿರ್ದೇಶಕರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.
    ವಿದ್ಯಾರ್ಥಿನಿಯನ್ನು ಕಾಮದ ದೃಷ್ಟಿಯಿಂದ ನೋಡಿದ ವೈದ್ಯ ಅಶ್ವಿನ್ ಹೆಬ್ಬಾರ್ ಅವರನ್ನೂ ಸೇವೆಯಿಂದ ವಜಾಗೊಳಿಸಬೇಕು. ತಪ್ಪಿತಸ್ಥರ ವಿರುದ್ಧ ದೂರು ದಾಖಲಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಸಹಾಯಕ ಅಧಿಕಾರಿ ಬಿ.ಎಸ್.ಕಡಕಬಾವಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಲುಕ್ಮಾನ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts