More

    ಸಿಂದಗಿ ಕ್ಷೇತ್ರದ ಘೋಷಿತ ಜೆಡಿಎಸ್​ ಅಭ್ಯರ್ಥಿ ಶಿವಾನಂದ ಪಾಟೀಲ್ ಹೃದಯಾಘಾತದಿಂದ ನಿಧನ: ಎಚ್​ಡಿಕೆ ಸಂತಾಪ ​

    ವಿಜಯಪುರ: ಸಿಂದಗಿ (Sindagi) ಕ್ಷೇತ್ರದ ಘೋಷಿತ ಜೆಡಿಎಸ್​ ಅಭ್ಯರ್ಥಿ (JDS candidate) ಶಿವಾನಂದ ಪಾಟೀಲ್​ ಸೋಮಜಾಳ (54) ಅವರು ಹೃದಯಾಘಾತ (Heart Attack)ದಿಂದ ಕೊನೆಯುಸಿರೆಳೆದಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ (Karnataka Assembly Election) ಯಲ್ಲಿ ಶಿವಾನಂದ ಅವರು ಸ್ಪರ್ಧೆ ಮಾಡಲು ಎಲ್ಲ ತಯಾರಿ ಮಾಡಿಕೊಂಡಿದ್ದರು. ಆದರೆ, ವಿಧಿಯಾಟದಲ್ಲಿ ಅಕಾಲಿಕ ಮರಣ ಹೊಂದಿದ್ದಾರೆ.

    ಶಿವಾನಂದ ಪಾಟೀಲ್​ ಅವರು ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ಸೋಮಜಾಳ ಗ್ರಾಮದ‌ವರು. ಈ ಹಿಂದೆ ಜೆಡಿಎಸ್ (JDS)​ ಬಿಡುಗಡೆ ಮಾಡಿದ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ ಸಿಂದಗಿ ಕ್ಷೇತ್ರದಿಂದ ಶಿವಾನಂದ ಪಾಟೀಲ್ (Sivananda Patil Somajala) ಜೆಡಿಎಸ್​ ಟಿಕೆಟ್ (JDS Ticket)​ ಖಚಿತವಾಗಿತ್ತು. ಈ ಹಿನ್ನೆಲೆ ಅವರು ಚುನಾವಣೆಗೆ ಪೂರ್ವ ತಯಾರಿ ನಡೆಸುತ್ತಿದ್ದರು. ನಿನ್ನೆಯಷ್ಟೇ ನಾಗಠಾಣ ಕ್ಷೇತ್ರದಲ್ಲಿ ‌ನಡೆದ ಪಕ್ಷದ ಪಂಚರತ್ನ ಕಾರ್ಯಕ್ರಮದಲ್ಲಿಯು ಭಾಗಿಯಾಗಿದ್ದರು.

    ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲಿ‌ ಕುಮಾರಸ್ವಾಮಿ (HD Kumaraswamy) ಅವರೊಂದಿಗೆ ಶಿವಾನಂದ ಅವರು ಭಾಗಿಯಾಗಿದ್ದರು. ಇದಾದ ಬಳಿಕ ಸಂಜೆ ಸಿಂದಗಿ ಪಟ್ಟಣಕ್ಕೆ ತೆರಳಿದ್ದರು. ಆದರೆ, ರಾತ್ರಿ‌ 9ರ ವೇಳೆ ಅಸ್ವಸ್ಥಗೊಂಡ ಶಿವಾನಂದ ಪಾಟೀಲ್ ಅವರನ್ನು ಸಿಂದಗಿ ಪಟ್ಟಣದ ವಾತ್ಸಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಚಿಕಿತ್ಸೆ ಫಲಕಾರಿಯಾಗದೇ ತೀವ್ರ ಹೃದಯಾಘಾತದಿಂದ ಶಿವಾನಂದ ಮೃತಪಟ್ಟಿದ್ದಾರೆಂದು ವೈದ್ಯರು ಖಚಿತ ಪಡಿಸಿದ್ದಾರೆ. ಹದಿನಾರು ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು. ಇತ್ತೀಚಿನ‌ ವರ್ಷಗಳಲ್ಲಿ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದರು. ಶಿವಾನಂದ ಅವರು ಪತ್ನಿ ವಿಶಾಲಾಕ್ಷಿ, ಓರ್ವ ಪುತ್ರ. ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿ, ಅಕಾಲಿಕವಾಗಿ ನಿಧನರಾಗಿದ್ದಾರೆ.

    ಟ್ವೀಟ್​ ಮೂಲಕ ಎಚ್​ಡಿಕೆ ಸಂತಾಪ
    ಸರಣಿ ಟ್ವೀಟ್​ ಮೂಲಕ ಶಿವಾನಂದ ಅವರ ಅಕಾಲಿಕ ಮರಣಕ್ಕೆ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ಸಿಂದಗಿ ವಿಧಾನಸಭೆ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ಶಿವಾನಂದ ಪಾಟೀಲ ಅವರ ಅಕಾಲಿಕ ಮರಣ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಜ.18ರಂದು ಇಡೀ ದಿನ ಅವರು ನನ್ನೊಂದಿಗೆ ಸಿಂದಗಿ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಮರುದಿನ ಯಾತ್ರೆಯೊಂದಿಗೆ ನನ್ನನ್ನು ಆತ್ಮೀಯವಾಗಿ ದೇವರ ಹಿಪ್ಪರಗಿ ಕ್ಷೇತ್ರಕ್ಕೆ ಬೀಳ್ಕೊಟ್ಟಿದ್ದರು. ನಿನ್ನೆ ಮಧ್ಯಾಹ್ನವೂ ಮತ್ತೆ ನಾಗಠಾಣ ಕ್ಷೇತ್ರದ ಯಾತ್ರೆಯಲ್ಲಿ ಭಾಗವಹಿಸಿದ್ದರು. ಸೇನೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತಿ ಪಡೆದಿದ್ದ ಪಾಟೀಲರು, ಸಮಾಜ ಸೇವೆಯ ಅದಮ್ಯ ಹಂಬಲ ಹೊಂದಿದ್ದರು. ಅತ್ಯುತ್ತಮ ಸಂಘಟನಾ ಶಕ್ತಿ, ಕ್ರಿಯಾಶೀಲತೆ ಹೊಂದಿದ್ದ ಅವರು ಪರಿಚಯವಾದ ಅಲ್ಪಕಾಲದಲ್ಲಿಯೇ ನನಗೆ ಅತ್ಯಂತ ಆತ್ಮೀಯರಾಗಿದ್ದರು. ಶಿವಾನಂದ ಪಾಟೀಲರ ಅಗಲಿಕೆ ನನಗೆ ವೈಯಕ್ತಿಕವಾಗಿ ಅತೀವ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್​ಡಿಕೆ ಸಂತಾಪ ಸೂಚಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ತಾಳ್ಮೆಯ ಚಾಲನೆ ಅಗತ್ಯ; ರಸ್ತೆ ಅಪಘಾತ, ಹೆಚ್ಚುತ್ತಿರುವ ಗಲಾಟೆ

    ಜೈಲರ್​ನಲ್ಲಿ ತಮನ್ನಾ; ರಜನಿಕಾಂತ್ ಜತೆಗೆ ಮೊದಲ ಬಾರಿಗೆ ನಟನೆ

    ಫೆ.10ಕ್ಕೆ ಅಧಿವೇಶನ, 17ಕ್ಕೆ ಬಜೆಟ್: ಸಂಪುಟ ಸಭೆಯಲ್ಲಿ ನಿರ್ಧಾರ; ಚುನಾವಣೆ ಗುಂಗಲ್ಲಿ ಜನಪ್ರತಿನಿಧಿಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts