21 C
Bengaluru
Thursday, January 23, 2020

ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಿ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಸಿಂದಗಿ: ಶಿಕ್ಷಕರು ವೃತ್ತಿ ಪಾವಿತ್ರತೆ ಜತೆಗೆ ಮಕ್ಕಳಲ್ಲಿ ನೈತಿಕತೆ ಹಾಗೂ ಸೃಜನಶೀಲತೆ ಬೆಳೆಸುವ ಕಾರ್ಯ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಹೇಳಿದರು.

ಪಟ್ಟಣದ ಮಾಂಗಲ್ಯ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮತ್ತು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಮಂದಾರ ಪ್ರತಿಷ್ಠಾನ, ಸುಷ್ಮಾ ಶಿಕ್ಷಣ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಪ್ರೌಢಶಾಲೆ ಸಹಶಿಕ್ಷಕರ ಸಂಘದ ಸಹಯೋಗದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಶಿಕ್ಷಕರ ದಿನೋತ್ಸವ ಹಾಗೂ ಸಿರಿಗನ್ನಡ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಮುಖಂಡರಾದ ಸಿ.ಎಂ. ಮನಗೂಳಿ, ಕಾಲೇಜು ಪ್ರಾಧ್ಯಾಪಕ ಡಾ. ಅರವಿಂದ ಮನಗೂಳಿ ಮಾತನಾಡಿ, ಸಿಂದಗಿಯಲ್ಲಿ ನಿರ್ಮಾಣವಾಗುವ ಗುರುಭವನಕ್ಕೆ 1 ಲಕ್ಷ ರೂ. ದೇಣಿಗೆ ನೀಡುವುದಾಗಿ ವಾಗ್ದಾನ ಮಾಡಿದರು.

ಬರಡೋಲ ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ಬಸವರಾಜ ಕುಂಬಾರ ಉಪನ್ಯಾಸ ನೀಡಿದರು. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೆಡಶ್ಯಾಳ, ತಾಳಿಕೋಟೆ ಕಸಾಪ ಅಧ್ಯಕ್ಷೆ ಸುಮಂಗಲಾ ಕೊಳ್ಳುರ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. 24 ಶಿಕ್ಷಕರಿಗೆ ಸಿರಿಗನ್ನಡ ಆದರ್ಶ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸಂಚಾಲಕಿ ರಾಜಯೋಗಿನಿ ಪವಿತ್ರಾಜಿ ಸಾನ್ನಿಧ್ಯ ವಹಿಸಿದ್ದರು.

ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಯು.ಐ. ಶೇಖ, ತಾಲೂಕು ಅಧ್ಯಕ್ಷ ಎಂ.ಎಸ್. ಚೌಧರಿ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಸ್. ಮಲ್ಲೇದ, ರಾಜ್ಯ ನೌಕರರ ಸಂಘದ ತಾಲೂಕಾಧ್ಯಕ್ಷ ಅಶೋಕ ತೆಲ್ಲೂರ, ಎ.ಕೆ. ಪತ್ತಾರ, ಮಲ್ಲನಗೌಡ ಹಡಲಗೇರಿ, ಎಸ್.ಎಸ್. ಕೆರೂರ, ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಎಸ್. ಬಿರಾದಾರ, ಸಿ.ಬಿ. ಗಡಗಿ, ಬಸವರಾಜ ಅಗಸರ, ರಾಗರಂಜನಿ ಸ್ಟುಡಿಯೋದ ಡಾ. ಪ್ರಕಾಶ ಇತರರು ಇದ್ದರು. ಕಸಾಪ ಅಧ್ಯಕ್ಷ ಸಿದ್ದಲಿಂಗ ಚೌಧರಿ ಸ್ವಾಗತಿಸಿದರು. ಅಶೋಕ ಬಿರಾದಾರ ಹಾಗೂ ಶಿಲ್ಪಾ ಪೂಜಾರಿ ನಿರೂಪಿಸಿದರು. ಮಾಧ್ಯಮ ಪ್ರತಿನಿಧಿ ಆನಂದ ಶಾಬಾದಿ ವಂದಿಸಿದರು.

ಬಿಇಒ ಅಸಹಕಾರ ಆರೋಪ
ಶಿಕ್ಷಣ ಇಲಾಖೆ ಮತ್ತು ಸಾಹಿತ್ಯ ಪರಿಷತ್‌ಗೆ ಅವಿನಾಭಾವ ಸಂಬಂಧವಿದೆ. ಆದರೆ ಶಿಕ್ಷಕರ ದಿನಾಚರಣೆಗೆ ಸಹಕಾರ ಕೊಡದ ಶಿಕ್ಷಣ ಇಲಾಖೆ ಕ್ರಮ ವಿಷಾದನೀಯ. ಇಂತಹ ಮಾದರಿ ಕಾರ್ಯಕ್ರಮದಲ್ಲಿ ಬಿಇಒ ಎಚ್.ಎಸ್. ನಗನೂರ ಅವರು ಪಾಲ್ಗೊಳ್ಳದೆ ರಾಜಕೀಯ ಮಾಡುವುದು ಸರಿಯಲ್ಲ. ಶಿಕ್ಷಕರೊಬ್ಬರು ಸಾಹಿತ್ಯ ಪರಿಷತ್ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವುದು ಇಲಾಖೆ ಹೆಮ್ಮೆ ಪಡುವಂಥದ್ದು. ಮುಂದಿನ ದಿನಮಾನಗಳಲ್ಲಿ ಈ ರೀತಿಯ ಪ್ರಮಾದ ಆಗದ ಹಾಗೆ ನಡೆದುಕೊಳ್ಳಬೇಕು ಎಂದು ಕಸಾಪ ಜಿಲ್ಲಾಧಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಹೇಳಿದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...