More

    ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಲಿ

    ಸಿಂಧನೂರು: ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕೆಂದು ಅಕ್ಕಮಹಾದೇವಿ ಮಹಿಳಾ ವಿವಿ ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿ ಡಾ.ಎಂ.ನಾಗರಾಜ ಹೇಳಿದರು.

    ತಾಲೂಕಿನ ವಿರುಪಾಪುರ ಗ್ರಾಮದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನೆ ಮಹಾತ್ಮಗಾಂಧಿ ಅವರ ಕನಸಿನ ಕೂಸಾಗಿದೆ. ಈ ಶಿಬಿರದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರೆ ಗ್ರಾಮೀಣ ಪ್ರದೇಶಗಳಲ್ಲಿ ಸಂಸ್ಕೃತಿ, ಸಂಸ್ಕಾರ, ಆಚಾರ ವಿಚಾರಗಳ ಕುರಿತು ವಿಶೇಷ ಅನುಭವ ಪಡೆದುಕೊಳ್ಳಬಹುದು. ಸ್ವಚ್ಛತೆ ಕುರಿತು ಗ್ರಾಮಸ್ಥರಿಗೆ ಅರಿವು ಮೂಡಿಸಲು ಸಾಧ್ಯವಾಗುತ್ತದೆ ಎಂದರು.

    ಎಸ್‌ಡಿಎಂಸಿ ಅಧ್ಯಕ್ಷ ಮಾರುತಿ, ಬಸವರಾಜ ಹಳ್ಳಿ, ಬಸವರಾಜ ಬಾದರ್ಲಿ, ರಮಾದೇವಿ ಶಂಭೋಜಿ, ಈಶಪ್ಪ ಭೇರಿಗಿ, ಬುಡ್ಡಪ್ಪ, ಸಿದ್ದಪ್ಪ, ಶಾಮಲಪ್ಪ, ಬಸವರಾಜ, ಶಿವಕುಮಾರ, ಸೋಮನಾಥ, ಅಮರೇಶ ಕಾರಟಗಿ, ಎನ್ನೆಸ್ಸೆಸ್ ಅಧಿಕಾರಿ ಡಾ.ನಾಗರೆಡ್ಡೆಪ್ಪ, ಕೌಸರ್‌ಬೇಗಂ, ಅನ್ನಪೂರ್ಣ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts