More

    ಮಿಶ್ರ ಬೆಳೆಯಿಂದ ಉತ್ತಮ ಆದಾಯ; ಜೆಡಿಎಸ್ ತಾಲೂಕು ಅಧ್ಯಕ್ಷ ಬಸವರಾಜ ನಾಡಗೌಡ ಅನಿಸಿಕೆ


    ಸಿಂಧನೂರು: ಮಿಶ್ರ ಬೆಳೆ ಬೆಳೆಯುವುದರಿಂದ ಭೂಮಿಯ ಫಲವತ್ತತೆ ಹೆಚ್ಚುವುದರ ಜತೆಗೆ ಉತ್ತಮ ಆದಾಯ ಗಳಿಸಬಹುದಾಗಿದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಬಸವರಾಜ ನಾಡಗೌಡ ಹೇಳಿದರು.

    ತಾಲೂಕಿನ ಜವಳಗೇರಾ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಎನ್‌ಎಫ್‌ಎಸ್‌ಎಂ ಯೋಜನೆಯಡಿ ತೊಗರಿ ಬೀಜದ ಕಿರುಚೀಲಗಳ ವಿತರಣೆ ಹಾಗೂ ಬೀಜೋಪಚಾರ ಕಾರ್ಯಕ್ರಮ ಉದ್ಘಾಟಿಸಿ ಭಾನುವಾರ ಮಾತನಾಡಿದರು. ಸರ್ಕಾರದ ಸೌಲಭ್ಯಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

    ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಡಾ.ಪ್ರಿಯಾಂಕಾ ಎಸ್. ಮಾತನಾಡಿ, ಭತ್ತದ ಬೀಜೋಪಚಾರ ವಿಧಾನ ಮತ್ತು ಯೂರಿಯಾ ರಸಗೊಬ್ಬರ ಬಳಕೆ ಕುರಿತು ಮಾಹಿತಿ ನೀಡಿದರು. ಅತಿಯಾದ ಗೊಬ್ಬರ ಬಳಕೆಯಿಂದಾಗುವ ದುಷ್ಪರಿಣಾಮದ ಬಗ್ಗೆ ತಿಳಿಸಿದರು. ಗಾಪಂ ಅಧ್ಯಕ್ಷೆ ಅಮರಮ್ಮ ಕರಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಇಲಾಖೆ ಸಿಬ್ಬಂದಿ ಕಳಕಪ್ಪ, ರಾಜಶೇಖರ, ಸಾವಿತ್ರಿ ಪಾಟೀಲ್, ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ ಎಂ. ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts