More

    ನಿತ್ಯ 25 ಜನರಿಗೆ ಕೊರೊನಾ ಲಸಿಕೆ; ಗ್ರಾಪಂ ಸದಸ್ಯರು, ಪಿಡಿಒಗಳಿಗೆ ತಹಸೀಲ್ದಾರ್ ಮಂಜುನಾಥ ಭೋಗಾವತಿ ಸೂಚನೆ

    ಸಿಂಧನೂರು: ಕೋವಿಡ್-19 ಎರಡನೇ ಅಲೆ ವ್ಯಾಪಿಸುತ್ತಿದ್ದು, ಗ್ರಾಪಂ ಮಟ್ಟದಲ್ಲಿ ಪ್ರತಿದಿನ ಕನಿಷ್ಠ 25 ಜನರಿಗೆ ಕೊರೊನಾ ಲಸಿಕೆ ಹಾಕಿಸಬೇಕು ಎಂದು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪಿಡಿಒಗಳಿಗೆ ತಹಸೀಲ್ದಾರ್ ಮಂಜುನಾಥ ಭೋಗಾವತಿ ಸೂಚನೆ ನೀಡಿದರು.

    ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರಿಗಾಗಿ ನಗರದ ತಾಪಂ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕೋವಿಡ್ ಕುರಿತ ಜಾಗೃತಿ ಸಭೆಯಲ್ಲಿ ಮಾತನಾಡಿದರು. ಕಳೆದ ವರ್ಷ ಕೋವಿಡ್ ಬಗ್ಗೆ ಮಾಹಿತಿ ಇರಲಿಲ್ಲ. ಆದರೀಗ ಭಾರತದಲ್ಲೇ ಎರಡು ಲಸಿಕೆ ಕಂಡು ಹಿಡಿಯಲಾಗಿದೆ. ಆದ್ದರಿಂದ ಗ್ರಾಮಗಳಲ್ಲಿ 60 ವರ್ಷ ಮೇಲ್ಪಟ್ಟವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೆತಂದು ಲಸಿಕೆ ಹಾಕಿಸುವುದು ಸದಸ್ಯರ ಜವಾಬ್ದಾರಿ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ತಲಾ 10 ಜನರನ್ನು ಕರೆತಂದು ಲಸಿಕೆ ಹಾಕಿಸಬೇಕು ಎಂದರು.

    ಸಾರ್ವಜನಿಕರು ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅಧಿಕಾರಿಗಳಿಗೆ ಸದಸ್ಯರು, ಜನರು ಸಹಕಾರ ನೀಡಬೇಕು. ಮುಂದಿನ ದಿನಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಿಸಿದರೆ ಮತ್ತೆ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಇದಕ್ಕೆ ನಾವು ಅವಕಾಶ ಕೊಡಬಾರದು ಎಂದರು.

    ತಾಲೂಕು ಆರೋಗ್ಯಾಧಿಕಾರಿ ನಂದಕುಮಾರ, ತಾಲೂಕು ಆಡಳಿತದ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಕೋವಿಡ್ ಚಿಕಿತ್ಸೆಯನ್ನು ಈಗಾಗಲೇ ನೀಡಲಾಗುತ್ತಿದೆ. ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒಗಳು ಸಹಕಾರ ನೀಡಿದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಬಹುದು ಎಂದರು. ತಾಪಂ ಇಒ ಪವನ ಕುಮಾರ, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts