ಸಿಂಧನೂರು ನಗರಕ್ಕೆ ನ.13ರಿಂದ ನಾಲ್ಕು ದಿನಕ್ಕೊಮ್ಮೆ ಕುಡಿವ ನೀರು ಸರಬರಾಜು: ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಮಾಹಿತಿ

blank

ಸಿಂಧನೂರು: ನಗರದ ಜನತೆಗೆ ಬಹುದಿನದ ಬೇಡಿಕೆಯಾಗಿದ್ದ ಕುಡಿವ ನೀರಿನ ಸಮಸ್ಯೆ ಪರಿಹರಿಸಲು ನಗರಸಭೆ ಆಡಳಿತ ಮಂಡಳಿ ನಿರ್ಧರಿಸಿದ್ದು, ನ.13 ರಿಂದ ನಾಲ್ಕು ದಿನಕ್ಕೊಮ್ಮೆ ಶುದ್ಧೀಕರಿಸಿದ ಕುಡಿವ ನೀರು ಪೂರೈಕೆ ಮಾಡಲಾಗುವುದೆಂದು ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿದ ಅವರು, ನಗರಸಭೆ ಆಡಳಿತ ಮಂಡಳಿ ವತಿಯಿಂದ ಕುಡಿವ ನೀರು, ನೈರ್ಮಲೀಕರಣ ಸ್ವಚ್ಛತೆ, ಬೀದಿ ದೀಪಗಳ ಅಳವಡಿಕೆ ಇನ್ನಿತರ ಮೂಲ ಸೌಕರ್ಯಗಳ ಜತೆಗೆ ಅಭಿವೃದ್ಧಿ ಕೆಲಸಗಳ ಬಗ್ಗೆ ಗಮನಹರಿಸಲಾಗುವುದು. 24/7 ಕುಡಿವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮಾರ್ಗದರ್ಶನದಲ್ಲಿ ಚರ್ಚಿಸಿ, ಈಗಿರುವ ವ್ಯವಸ್ಥೆಯಂತೆ 8 ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಇದರಿಂದ ಸಿಂಧನೂರಿನ ಜನತೆಗೆ ತೀವ್ರ ತೊಂದರೆಯಾಗುತ್ತಿದ್ದು, ಈ ವ್ಯವಸ್ಥೆ ಬದಲಾಯಿಸಿ 4 ದಿನಕ್ಕೊಮ್ಮೆ ಕುಡಿವ ನೀರು ಸರಬರಾಜು ಮಾಡಲು ನಿರ್ಧರಿಸಲಾಗಿದೆ. ಸದ್ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…