More

    ಹುಚ್ಚು ನಾಯಿಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಿ

    ಸಿಂಧನೂರು: ನಗರದಲ್ಲಿ ಹುಚ್ಚು ನಾಯಿ ಕಡಿತದಿಂದ ಜನರು ಭೀತಿಗೊಳಗಾಗಿದ್ದು, ನಗರಸಭೆ ಅಗತ್ಯ ಕ್ರಮಕ್ಕೆ ಮುಂದಾಗಬೇಕೆಂದು ಟಿಯುಸಿಐ ರಾಜ್ಯ ಉಪಾಧ್ಯಕ್ಷ ಎಂ.ಗಂಗಾಧರ ಒತ್ತಾಯಿಸಿದ್ದಾರೆ.

    ಇದನ್ನೂ ಓದಿ: ಅಳವಂಡಿಯಲ್ಲಿ‌ 11 ಜನರಿಗೆ ಕಚ್ಚಿದ ಹುಚ್ಚು ನಾಯಿ, ಭಯಬೀತರಾದ ಜನರು

    ನಗರದಲ್ಲಿ ಪೋಲಿಸೊಬ್ಬರ ಪುತ್ರನಿಗೆ ಹುಚ್ಚು ನಾಯಿಯೊಂದು ಗಂಭೀರವಾಗಿ ಕಡಿದು ಗಾಯಗೊಳಿಸಿದೆ. ನಗರದ ಎಲ್ಲ ವಾರ್ಡ್‌ಗಳಲ್ಲೂ ಹುಚ್ಚು ನಾಯಿಗಳ ಹಾವಳಿ ಮಿತಿ ಮೀರಿದೆ. ಬೀದಿ ನಾಯಿಗಳನ್ನು ನಿಯಂತ್ರಣ ಮಾಡಬೇಕಾದ ನಗರಸಭೆ ಸಿಬ್ಬಂದಿ ನಿರ್ಲಕ್ಷ್ಯ ಧೋರಣೆ ತಾಳಿರುವುದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

    ಬಿಡಾಡಿ ದನಗಳ ಹಾವಳಿ ಕೂಡಾ ಹೆಚ್ಚಾಗಿದ್ದು, ಸಂಚಾರಕ್ಕೆ ಸಮಸ್ಯೆಯಾಗಿದೆ. ಅಪಘಾತದಿಂದಾಗಿ ಬಿಡಾಡಿ ದನಗಳು ಸಾಯುತ್ತಿವೆ ಇಲ್ಲವೇ ಗಾಯಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಹುಚ್ಚು ನಾಯಿ ಹಾಗೂ ಬಿಡಾಡಿ ದನಗಳನ್ನು ನಿಯಂತ್ರಿಸಬೇಕೆಂದು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts