More

    ಆರು ಹಳ್ಳಿಗಳಲ್ಲಿ ಶುದ್ಧ ಕುಡಿವ ನೀರು ಪೂರೈಕೆ; ಶಾಸಕ ವೆಂಕಟರಾವ ನಾಡಗೌಡ ಹೇಳಿಕೆ

    1.5 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ | ಜಲ ಜೀವನ್ ಮಿಷನ್ ಯೋಜನೆ ಆರಂಭ

    ಸಿಂಧನೂರು: ತಾಲೂಕಿನ ಆರು ಹಳ್ಳಿಗಳಿಗೆ ಜಲ ಜೀವನ್ ಮಿಷನ್ ಯೋಜನೆಯಡಿ ಶಾಶ್ವತ ಶುದ್ಧ ಕುಡಿವ ನೀರು ಪೂರೈಕೆ ಮಾಡಲಾಗುವುದು ಎಂದು ಶಾಸಕ ವೆಂಕಟರಾವ ನಾಡಗೌಡ ಹೇಳಿದರು.

    ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಬುಧವಾರ 1.5 ಕೋಟಿ ರೂ. ವೆಚ್ಚದಲ್ಲಿ ಕುಡಿವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ತಾಲೂಕಿನ ಕೆಲ ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಅರಿತು ಶಾಶ್ವತ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ತಾಲೂಕಿನಲ್ಲಿ ತಿಮ್ಮಾಪುರ, ಬೆಳಗುರ್ಕಿ, ಸಾಲಗುಂದ, ಮುಕ್ಕುಂದ, ಸಿಂಗಾಪುರ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಯೋಜನೆ ಅನುಷ್ಠಾನಗೊಳಿಸಲಾಗಿದೆ. ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಮುಗಿಸಿ ಸೇವೆಗೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

    ಸಂಸದ ಸಂಗಣ್ಣ ಕರಡಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳಿದ್ದರೂ ಶುದ್ಧ ಕುಡಿವ ನೀರು ಸಿಗದೆ ಜನರು ತೊಂದರೆ ಎದುರಿಸುತ್ತಿದ್ದರು. ಇದನ್ನು ಅರಿತು ಸರ್ಕಾರ ವಿನೂತನ ಯೋಜನೆ ಕೈಗೆತ್ತಿಕೊಂಡು ಆರು ಗ್ರಾಮಗಳಲ್ಲಿ ಕುಡಿವ ನೀರಿನ ಪೈಪ್‌ಲೈನ್ ಕಾಮಗಾರಿ ನಡೆಸಿ ಶುದ್ಧ ಕುಡಿವ ನೀರು ಒದಗಿಸುವ ಕೆಲಸಕ್ಕೆ ಮುಂದಾಗಿದೆ. ಯೋಜನೆ ಪೂರ್ಣಗೊಂಡ ನಂತರ ಇದರ ಉಸ್ತುವಾರಿ ಗ್ರಾಮಸ್ಥರೇ ವಹಿಸಿಕೊಂಡು ಲಾಭ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts