More

    ಮತದಾರರಲ್ಲಿ ಚುನಾವಣೆ ಪ್ರಕ್ರಿಯೆ ಜಾಗೃತಿ

    ಸಿಂಧನೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಳಕೆ ಹಾಗೂ ಮತದಾನ ಖಾತ್ರಿ ಯಂತ್ರ (ವಿವಿ ಪ್ಯಾಟ್) ಕಾರ್ಯವೈಖರಿ ಕುರಿತು ತಹಸಿಲ್ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಪ್ರಮುಖರಿಗೆ ಸೋಮವಾರ ಪ್ರಾತ್ಯಕ್ಷಿಕೆ ನೀಡಲಾಯಿತು.

    ತಹಸೀಲ್ದಾರ್ ಅರುಣ್ ದೇಸಾಯಿ ಮಾತನಾಡಿ, ವಿದ್ಯುನ್ಮಾನ ಮತಯಂತ್ರ ಬಳಕೆ ಹಾಗೂ ಮತದಾನ ಖಾತ್ರಿ ಕುರಿತಂತೆ ಜಾಗೃತಿ ಮೂಡಿಸಲಾಗುತ್ತಿದೆ. ಬೂತ್‌ವಾರು ವಿವಿ ಪ್ಯಾಟ್ ಬಳಕೆ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮತದಾರರಲ್ಲಿ ಚುನಾವಣಾ ಪ್ರಕ್ರಿಯೆ ಬಗ್ಗೆ ವಿಶ್ವಾಸ ಮೂಡಿಸಲಾಗುವುದು. ಮತದಾರರು ಕಲ್ಪಿತ ಮತದಾನ ಮಾಡಿ, ಇವಿಎಂ ಯಂತ್ರದಲ್ಲಿ ಚಲಾಯಿಸುವ ಮತ ಹಾಗೂ ಮತದಾನ ಖಾತ್ರಿ ಬಗ್ಗೆ ಮನವರಿಕೆ ಮಾಡಿಕೊಳ್ಳಬಹುದಾಗಿದೆ ಎಂದರು.

    ಮತದಾರರ ಪಟ್ಟಿ ಪರಿಷ್ಕರಿಸಿದ್ದು, 18 ಸಾವಿರ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಎರಡು ಕಡೆ ಹೆಸರು ಹೊಂದಿದವರು ಹಾಗೂ ನಿಧನ ಹೊಂದಿದವರ ಹೆಸರು ತೆಗೆದು ಹಾಕಲಾಗಿದೆ. 14 ಸಾವಿರ ಮತದಾರರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಕ್ಷೇತ್ರದಲ್ಲಿ 269 ಬೂತ್‌ಗಳಿದ್ದು 2.36 ಲಕ್ಷ ಮತದಾರರಿದ್ದಾರೆ. 1.82 ಲಕ್ಷ ಮತದಾರರು ಆಧಾರ್‌ಲಿಂಕ್ ಪಡೆದುಕೊಂಡಿದ್ದಾರೆ ಎಂದು ತಹಸೀಲ್ದಾರ್ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts