ಸಿಂಧನೂರು: ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಾಗ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ನಾಗರಾಜ ಕಾಟ್ವಾ ಹೇಳಿದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕನಕದಾಸ ಪದವಿ ಪೂರ್ವ ಕಾಲೇಜಿನಿಂದ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳುತ್ತಿರುವುದು ದುರ್ದೈವದ ಸಂಗತಿ. ಸಮಾಜ ನನಗೇನು ಮಾಡಿದೆ ಎನ್ನುವುದಕ್ಕಿಂತ ಸಮಾಜಕ್ಕಾಗಿ ನಾನೇನು ಮಾಡಬಲ್ಲೆನೆಂದು ಯೋಚಿಸಿ ಮುನ್ನಡೆದರೆ ಸಾಧನೆ ಸಾಧ್ಯವಾಗುತ್ತದೆ ಎಂದರು.