More

    ಬಸನಗೌಡ ಬಾದರ್ಲಿ ಪಕ್ಷೇತರರಾಗಿ ಉಮೇದುವಾರಿಕೆ

    ಸಿಂಧನೂರು: ಸ್ಥಳೀಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಕೆಆರ್‌ಪಿಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ಸೋಮವಾರ ನಾಮಪತ್ರ ಸಲ್ಲಿಸಿದರು.
    ಬಿಜೆಪಿ ಅಭ್ಯರ್ಥಿಯಾಗಿ ಕೆ.ಕರಿಯಪ್ಪ ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ನಗರದ ತಹಸಿಲ್ ಕಚೇರಿಗೆ ಪ್ರಮುಖರೊಂದಿಗೆ ಆಗಮಿಸಿದ ಕೆ.ಕರಿಯಪ್ಪ, ಚುನಾವಣಾಧಿಕಾರಿ ಮಹೇಶ ಪೋತೆದಾರರಿಗೆ ನಾಮಪತ್ರ ಸಲ್ಲಿಸಿದರು. ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ನಗರಸಭೆ ಸದಸ್ಯ ಕೆ.ಹನುಮೇಶ, ನಾಗರಾಜ ವಕೀಲ ಇದ್ದರು. ಏ.19 ರಂದು ಕೆ.ಕರಿಯಪ್ಪನವರು ಬಿಜೆಪಿ ರಾಜ್ಯ ಹಾಗೂ ಜಿಲ್ಲಾ ಪ್ರಮುಖರ ಸಮ್ಮುಖದಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

    ಜೆಡಿಎಸ್ ಅಭ್ಯರ್ಥಿಯಾಗಿ ವೆಂಕಟರಾವ ನಾಡಗೌಡ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ತಹಸಿಲ್ ಕಚೇರಿಗೆ ಪತ್ನಿಯೊಂದಿಗೆ ಆಗಮಿಸಿದ ಶಾಸಕ ನಾಡಗೌಡ, ಚುನಾವಣಾಧಿಕಾರಿಗೆೆ ನಾಮಪತ್ರ ಸಲ್ಲಿಸಿದರು. ನಗರಸಭೆ ಸದಸ್ಯ ಜಿಲಾನಿಪಾಷಾ, ಮುಖಂಡ ಅಯ್ಯನಗೌಡ ಆಯನೂರು, ಜೆಡಿಎಸ್ ಯುವ ಘಟಕ ತಾಲೂಕು ಅಧ್ಯಕ್ಷ ಸುಮಿತ್ ತಡಕಲ್ ಇದ್ದರು. ಏ.18 ರಂದು ಸಾವಿರಾರು ಕಾರ್ಯಕರ್ತರೊಂದಿಗೆ ಆಗಮಿಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

    ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕಾಳಿಂಗಪ್ಪ ವಕೀಲ, ನಗರಸಭೆ ಮಾಜಿ ಅಧ್ಯಕ್ಷ ಜಾಫರ್ ಜಾಗೀರದಾರ್, ಎಂ.ಅಮರೇಗೌಡ ವಕೀಲ, ಖಾಜಿ ಮಲಿಕ್, ವೈ.ಅನಿಲ್ ಕುಮಾರ ಇತರರಿದ್ದರು. ಏ.18 ರಂದು ಹಂಪನಗೌಡ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

    ಪಕ್ಷೇತರ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ನಾಮಪತ್ರ ಸಲ್ಲಿಸಿದರು. ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ ಜವಳಿ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಶರಣಯ್ಯ ಕೋಟೆ ಸೇರಿ ಹಲವರು ಇದ್ದರು. ಬಸನಗೌಡ ಬಾದರ್ಲಿಗೆ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಏ.20 ರಂದು ಸಾವಿರಾರು ಬೆಂಬಲಿಗರೊಂದಿಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

    ಕೆಆರ್‌ಪಿಪಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ನೆಕ್ಕಂಟಿ, ಕೆಆರ್‌ಎಸ್ ಪಕ್ಷದಿಂದ ನಿರುಪಾದಿ ಗೋಮರ್ಸಿ, ಪಕ್ಷೇತರ ಅಭ್ಯರ್ಥಿಯಾಗಿ ಎನ್.ರಮ್ಯಾ, ಉತ್ತಮ ಪ್ರಜಾಕೀಯ ಪಾರ್ಟಿಯಿಂದ ನಿಜಗುಣಯ್ಯ ಉಮೇದುವಾರಿಕೆ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts