More

    ಸರ್ಕಾರದ ಸೌಲಭ್ಯ ಬಳಸಿಕೊಳ್ಳಿ

    ಸಿಂಧನೂರು: ಮಡಿವಾಳ ಸಮುದಾಯದವರು ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸವಾಲುಗಳನ್ನು ಸ್ವೀಕರಿಸಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕೆಂದು ಚಿತ್ರದುರ್ಗ ಮಹಾಸಂಸ್ಥಾನಮಠದ ಬಸವ ಮಾಚಿದೇವ ಸ್ವಾಮೀಜಿ ಹೇಳಿದರು.

    ನಗರದ ಸ್ತ್ರೀಶಕ್ತಿ ಭವನದಲ್ಲಿ ಮಡಿವಾಳ ಮಾಚಿದೇವ ಸಂಘ ತಾಲೂಕು ಘಟಕ ಮಂಗಳವಾರ ಹಮ್ಮಿಕೊಂಡಿದ್ದ ವೀರಶರಣ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು. ರಾಜ್ಯ ಸರ್ಕಾರ ಮಾಚಿದೇವ ಅಭಿವೃದ್ಧಿ ನಿಗಮ ಸ್ಥಾಪಿಸಿ, 100 ಕೋಟಿ ರೂಪಾಯಿ ಮೀಸಲಿಟ್ಟಿದೆ. ಸಮುದಾಯದ ಜನರು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಮಡಿವಾಳ ಮಾಚಿದೇವ ಸಂಘದ ಜಿಲ್ಲಾಧ್ಯಕ್ಷ ಜಿ.ಸುರೇಶ, ಯುವ ಘಟಕದ ಅಧ್ಯಕ್ಷ ಮುದಿಯಪ್ಪ ಡೈಮಂಡ್, ತಾಲೂಕು ಘಟಕದ ಮಾಜಿ ಮಾಜಿ ಅಧ್ಯಕ್ಷ ಅಮರೇಶ ಕುನ್ನಟಗಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ದೊಡ್ಡ ಬಸವರಾಜ, ಬಸವಕೇಂದ್ರದ ಜಿಲ್ಲಾಧ್ಯಕ್ಷ ವೀರಭದ್ರಪ್ಪ ಕುರುಕುಂದಿ, ಜಿಪಂ ಮಾಜಿ ಸದಸ್ಯ ಎನ್.ಶಿವನಗೌಡ ಗೊರೇಬಾಳ, ಕನ್ನಡ ವಿವಿ ಸಿಂಡಿಕೇಟ್ ಸದಸ್ಯ ಬಸವರಾಜ ಕೊಪ್ಪರ, .ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ.ಕರಿಯಪ್ಪ, ಜೆಡಿಎಸ್ ತಾಲೂಕು ಅಧ್ಯಕ್ಷ ಬಸವರಾಜ ನಾಡಗೌಡ, ವಕೀಲರಾದ ನಿರುಪಾದೆಪ್ಪ ಗುಡಿಹಾಳ, ಎಚ್.ಬಸವರಾಜ, ಪ್ರಮುಖರಾದ ಗುರುನಾಥ ಕನ್ನಾರಿ, ಸೋಮನಗೌಡ ಬಾದರ್ಲಿ, ಡಿ.ಎಚ್.ಕಂಬಳಿ, ಬಸವರಾಜ ಬಾದರ್ಲಿ,
    ಹನುಮಂತ ಗೊರೇಬಾಳ, ಅಮರೇಶ ಕಡಬೂರು, ಮಹಾದೇವಪ್ಪ ಮುಳ್ಳೂರು, ರಾಮಣ್ಣ ಹಂಚಿನಾಳ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts