More

    ಬಂಗಾಲಿ ಕ್ಯಾಂಪಿನ ನಿರಾಶ್ರಿತರೊಂದಿಗೆ ಚರ್ಚೆ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿಕೆ

    ಸಿಂಧನೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕೈಗೊಂಡಿರುವ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಪಾದಯಾತ್ರೆ ಅ. 21, 22, 23 ರಂದು ರಾಯಚೂರಿನಲ್ಲಿ ನಡೆಯಲಿದ್ದು ತಾಲೂಕಿನಿಂದ 7 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು.

    3570 ಕಿ.ಮೀ. ಐತಿಹಾಸಿಕ ಪಾದಯಾತ್ರೆಗೆ ಸಾಹಿತಿಗಳು, ಸಂಘ-ಸಂಸ್ಥೆಗಳ ಮುಖಂಡರು, ಮಹಿಳೆಯರು, ಯುವಜನರು, ರೈತರು, ಕಾರ್ಮಿಕರು ಭಾಗವಹಿಸಿ ಬೆಂಬಲಿಸುತ್ತಿದ್ದಾರೆ. ಆಂಧ್ರಪ್ರದೇಶದ ಹಾಲೂರು, ಆಧೋನಿ, ಎಮ್ಮಿಗನೂರು, ಮಂತ್ರಾಲಯ ಮಾರ್ಗವಾಗಿ ರಾಯಚೂರಿಗೆ ಪಾದಯಾತ್ರೆ ಆಗಮಿಸಲಿದೆ.

    ಸಿಂಧನೂರು ತಾಲೂಕಿನಿಂದ 4 ಸಾವಿರ ಮಹಿಳೆಯರು, 3 ಸಾವಿರ ಯುವಕರು ತೆರಳಲಿದ್ದಾರೆ. 1 ಲಕ್ಷ ಜನ ಪಾದಯಾತ್ರೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಈ ವೇಳೆ ಬಂಗಾಲಿ ಕ್ಯಾಂಪಿನ ನಿರಾಶ್ರಿತರೊಂದಿಗೆ ರಾಹುಲ್ ಗಾಂಧಿ ಚರ್ಚಿಸಲಿದ್ದಾರೆ. ರಾಯಚೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಬಹಿರಂಗ ಸಭೆ ನಡೆಯಲಿದೆ. ರಂಗೋಲಿ ಹಾಕಿ, ಕುಂಭ, ಕಳಸ, ಕೋಲಾಟ, ಹಲಗೆಮೇಳ ಮತ್ತಿತರ ಕಲಾತಂಡಗಳೊಂದಿಗೆ ಪಾದಯಾತ್ರೆ ನಡೆಯಲಿದೆ ಎಂದರು.

    ಜಿಪಂ ಮಾಜಿ ಸದಸ್ಯ ಶಿವನಗೌಡ ಎಲೆಕೂಡ್ಲಿಗಿ, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ನಗರಸಭೆ ಮಾಜಿ ಅಧ್ಯಕ್ಷ ಸೈಯದ್ ಜಾಫರ್‌ಅಲಿ ಜಾಗೀರ್‌ದಾರ್, ನಗರಸಭೆ ಸದಸ್ಯರಾದ ಎಚ್.ಬಾಷಾ, ಶೇಖರಪ್ಪ ಗಿಣಿವಾರ, ಮುನಿರ್‌ಪಾಷಾ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾಜಿಮಲ್ಲಿಕ್ ವಕೀಲ, ಛತ್ರಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಾಗವೇಣಿ ಪಾಟೀಲ್, ತಾಲೂಕು ಅಧ್ಯಕ್ಷ ದಾಕ್ಷಾಯಿಣಿ ಇದ್ದರು.

    ಮಲ್ಲಿಕಾರ್ಜುನ ಖರ್ಗೆ ಗೆಲುವು ನಿಶ್ಚಿತ: ಅಖಿಲ ಭಾರತ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಘಟಕದ ಅಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ವಿಶ್ವಾಸ ವ್ಯಕ್ತಪಡಿದರು. ಒಟ್ಟು 9,600 ಮತಗಳಿದ್ದು, ರಾಜ್ಯದಲ್ಲಿ ನಡೆದ ಚುನಾವಣೆಯಲ್ಲಿ 4,070 ಮತಗಳು ಚಲಾವಣೆಯಾಗಿವೆ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಹಿರಿಯ ರಾಜಕಾರಣಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಪಕ್ಷ ಸಂಘಟನೆ ಮತ್ತು ಅಧಿಕಾರಕ್ಕೆ ತರಲು ಶ್ರಮಿಸಲಿದ್ದಾರೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts