
ಸಿಂಧನೂರು : ನಗರದಲ್ಲಿ ವಿವಾಹಿತನೊಬ್ಬ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ವಿಶ್ವನಾಥ ಗುಂಡಪ್ಪ ಆರೋಪಿ. ಈತನಿಂದ ದೈಹಿಕ ಮತ್ತು ಮಾನಸಿಕವಾಗಿ ಘಾಸಿಗೊಳಗಾದ ಬಾಲಕಿಯೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ವಿಷಯ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬಾಲಕಿಗೆ ಆರೋಪಿ ಬೆದರಿಕೆಯೊಡ್ಡಿದ್ದ. ಪ್ರಕರಣವನ್ನು ಗಂಭೀರ ಪರಿಗಣಿಸಿರುವ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ