More

    ದೇಶದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಕೊಡುಗೆ ಅಪಾರ

    ಸಿಂಧನೂರು: ಸ್ವಾತಂತ್ರ್ಯ ನಂತರ ಹಸಿವು, ಬಡತನ, ಅನಕ್ಷರತೆಯಿಂದ ಕೂಡಿದ್ದ ದೇಶವನ್ನು ವಿಜ್ಞಾನ, ತಂತ್ರಜ್ಞಾನ, ಆಹಾರ ಸ್ವಾವಲಂಬನೆ ಗಳಿಸಿ ಬೆಳವಣಿಗೆಯಾಗಲು ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

    ನಗರದಲ್ಲಿನ ತಮ್ಮ ನಿವಾಸದಲ್ಲಿ ಮಂಗಳವಾರ ಹಲವರು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಿಜೆಪಿ ಅಧಿಕಾರಕ್ಕೆ ಬರುವ ಮುಂಚೆ ವಿದೇಶದಲ್ಲಿನ ಕಪ್ಪು ಹಣ ತಂದು ಎಲ್ಲ ನಾಗರಿಕರಿಗೆ ಹಂಚಲಾಗುವುದು. ರೈತರ ಆದಾಯ ದ್ವಿಗುಣಗೊಳಿಸಿ, ಬಡತನ ಹೊಗಲಾಡಿಸುವ ಭರವಸೆಯಿತ್ತು ಅಧಿಕಾರಕ್ಕೆ ಬಂದು 8 ವರ್ಷವಾದರೂ ಕೊಟ್ಟ ಯಾವ ಮಾತು ಕೂಡ ಈಡೇರಿಲ್ಲ. ದೇಶಕ್ಕೆ ಕಂಟಕ ತರುವ ಕೃಷಿ ಹಾಗೂ ಇತರ ಕಾನೂನು ಜಾರಿಗೆ ಮುಂದಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಅನೇಕ ಬಡವರ ಪರ ಯೋಜನೆಗಳನ್ನು ಜಾರಿಗೊಳಿಸಿದ್ದಲ್ಲದೆ, ಕೊಟ್ಟಿದ್ದ ಎಲ್ಲ ಭರವಸೆ ಈಡೇರಿಸಲಾಗಿದೆ ಎಂದರು.

    ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಎದ್ದಿದೆ. 2023 ರಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ ಖಚಿತ. ಸಿಂಧನೂರು ಕ್ಷೇತ್ರದಲ್ಲಿ ಶಾಸಕರ ಕಾರ್ಯವೈಖರಿ ಬಗ್ಗೆ ಸ್ವಪಕ್ಷೀಯರೇ ಆರೋಪ ಮಾಡುತ್ತಿದ್ದಾರೆ. ನಾನು ಶಾಸಕನಾಗಿದ್ದಾಗ ತಂದ ಯೋಜನೆಗಳ ಅನುಷ್ಠಾನ ಸಾಧ್ಯವಾಗಿಲ್ಲವೆ ಎಂದು ಆರೋಪಿಸಿದರು.

    ಕೆ.ಹಂಚಿನಾಳ ಗ್ರಾಮದ ವಿವಿಧ ಪಕ್ಷಗಳ 50 ಜನ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು. ನಗರಸಭೆ ಮಾಜಿ ಅಧ್ಯಕ್ಷ ಸೈಯದ್ ಜಾಫರ್ ಜಹಗೀರದಾರ್, ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ಅಧ್ಯಕ್ಷ ಪಂಪನಗೌಡ ಬಾದರ್ಲಿ, ನಗರ ಬ್ಲಾಕ್ ಅಧ್ಯಕ್ಷ ಖಾಜಿ ಮಲ್ಲಿಕ್, ಪ್ರಧಾನ ಕಾರ್ಯದರ್ಶಿ ವೈ.ಅನಿಲಕುಮಾರ, ಪ್ರಮುಖರಾದ ಲಿಂಗರಾಜ ಪಾಟೀಲ್, ಲಿಂಗನಗೌಡ ಮಾ.ಪಾ., ಶರಣೇಗೌಡ ಮಾ.ಪಾ., ದೇವೆಂದ್ರಗೌಡ ಮಾ.ಪಾ. ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts